ಯಾದಗಿರಿಯಲ್ಲಿ 5295 ಜನ ಕ್ವಾರಂಟೈನ್ ನಲ್ಲಿ

444
Share

ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ಗಳಲ್ಲಿ 5,229 ಜನ
ಜಿಲ್ಲೆಯ 1717 ವರದಿ ನೆಗೆಟಿವ್, 438 ವರದಿ ಬಾಕಿ

ಯಾದಗಿರಿ, ಮೇ 15 (ಕರ್ನಾಟಕ ವಾರ್ತೆ): ನೋವೆಲ್ ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ್ದ ಮಾದರಿಗಳ ಪೈಕಿ ಮೇ 15ರವರೆಗೆ ಒಟ್ಟು 1,717 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಶುಕ್ರವಾರ ಕಳುಹಿಸಲಾದ 80 ಹೊಸ ಮಾದರಿಗಳು ಸೇರಿದಂತೆ 438 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ ಪಿ-867, ಪಿ-868 ವ್ಯಕ್ತಿಗಳ ಆರೋಗ್ಯ ಸ್ಥಿರವಾಗಿರುತ್ತದೆ. ಹೊಸ ಜಿಲ್ಲಾಸ್ಪತ್ರೆಯ ಐಸೊಲೇಷನ್ ವಾರ್ಡ್‍ನಲ್ಲಿ 7 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಎಸ್‍ಐಸಿ ನಲ್ಲಿ 22 ಜನರನ್ನು ಮತ್ತು ಸುರಪುರ ಸೂಪರ್ ಕ್ವಾರಂಟೈನ್ ಸೆಂಟರ್‍ನಲ್ಲಿ 51 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದ 39 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 117 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ವೈರಸ್ ತಡೆಗೆ ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಜಿಲ್ಲೆಯ ಒಟ್ಟು 65 ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್‍ಗಳಲ್ಲಿ ಮೇ 15ರಂದು ಸೇರ್ಪಡೆಯಾಗಿರುವ 472 ಜನ ಸೇರಿದಂತೆ ಒಟ್ಟು 5,229 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950ಗೆ ಶುಕ್ರವಾರ 18 ಕರೆಗಳು ಬಂದಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರಲ್ಲಿ ಮನವಿ: ಕೋವಿಡ್-19 ಪೀಡಿತ ದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರು ಭಾರತಕ್ಕೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಅಥವಾ ವಾಟ್ಸ್‍ಆ್ಯಪ್ ಸಂಖ್ಯೆ:9449933946 ಅಥವಾ 24*7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರನ್ನು ಬಳಸಿ. ಕೈ ಸ್ವಚ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಿ ಮತ್ತು ಸಾಮಾಜಿಕ ಸಮೂಹ ಗುಂಪು ಸೇರುವುದನ್ನು ಮಾಡಬಾರದು ಎಂದು ಅವರು ಸಲಹೆ ನೀಡಿದ್ದಾರೆ.


Share