ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡಲು ಹೋಗಬೇಡಿ. ಡಿಸಿಎಂ ,ಡಿ.ಕೆ.ಶಿ

18
Share

 

ಯಾರಿಗೂ ಒಂದು ರೂಪಾಯಿ ಲಂಚ ನೀಡಬೇಡಿ, ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ರಾಮನಗರ,

“ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡಲು ಹೋಗಬೇಡಿ. ಲಂಚ ಕೇಳುವವರ ವಿರುದ್ಧ ದೂರು ನೀಡಲು ಎಲ್ಲಾ ಸರ್ಕಾರಿ ಕಚೇರಿಗಳ ಮುಂದೆ ದೂರವಾಣಿ ಸಂಖ್ಯೆಯನ್ನು ಶೀಘ್ರದಲ್ಲೇ ಹಾಕಲಿದ್ದೇವೆ” ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳು, ಜಲಸಂಪನ್ಮೂಲ ಸಚಿವರೂ ಆದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಅವರು ಡಿ.2ರ ಶನಿವಾರ ಕನಕಪುರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಸಂಪರ್ಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು; “ಕಂದಾಯ, ಪಂಚಾಯಿತಿ ಅಧಿಕಾರಿ ಸೇರಿದಂತೆ ಯಾವುದೇ ಸರ್ಕಾರಿ ಅಧಿಕಾರಿಗಳು ಲಂಚ ಕೇಳಿದರೆ ನೇರವಾಗಿ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ದೂರು ನೀಡಬಹುದು. ಜನರ ಅಹವಾಲುಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ನಮ್ಮ ತಾಲ್ಲೂಕಿನಲ್ಲಿ ಉತ್ತಮವಾದ ಆಡಳಿತ ನಡೆಯಬೇಕು. ಈ ಹಿಂದಿನ ತಹಶೀಲ್ದಾರ್ ಇದ್ದಾಗ ಒಂದಷ್ಟು ತೊಂದರೆಗಳು ಇದ್ದವು.

ಕನಕಪುರ- ರಾಮನಗರ ಜಿಲ್ಲೆಯ ಜನರ ಎಲ್ಲ ಜಮೀನುಗಳಿಗೆ ಸೂಕ್ತ ದಾಖಲೆಗಳನ್ನು ಅಧಿಕಾರಿಗಳು ಮಾಡಿಕೊಡಬೇಕು. ಡ್ರೋನ್ ತಂತ್ರಜ್ಞಾನದ ಮೂಲಕ ಜಮೀನುಗಳ ಸರ್ವೇ ಕಾರ್ಯ ನಡೆಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಈ ಕಾರ್ಯವನ್ನು ಉಯ್ಯಂಬಳ್ಳಿಯಿAದ ಪ್ರಾರಂಭ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಜಮೀನಿನ ಪೋಡಿ- ಪಹಣಿ ದಾಖಲೆಗಳು ನಿಮ್ಮದೇ ಮೊಬೈಲ್ನಲ್ಲಿ ದೊರೆಯುತ್ತದೆ.

ಈಗಾಗಲೇ ಭೂಮಿ ಯೋಜನೆಯ ಅಡಿ ಪಹಣಿ-ಪೋಡಿ ದಾಖಲೆಗಳು ಸಿಗುತ್ತಿವೆ. ದಿಶಾ ವೆಬ್ಸೈಟಿನಲ್ಲಿ ನಿಮ್ಮ ಜಮೀನಿನ ವಾಸ್ತವ ಸ್ಥಿತಿ ತಿಳಿಯುವಂತಹ ಕಾರ್ಯಕ್ರಮ ರೂಪಿಸಲಾಗಿದೆ. ಬೆಂಗಳೂರು ನಗರದಲ್ಲಿ ಆಸ್ತಿಗಳ ಡಿಜೀಟಲೀಕರಣ ಮತ್ತು ಮರು ಸರ್ವೇ ಕೆಲಸ ಪ್ರಗತಿಯಲ್ಲಿದೆ. ಕೆಲವೇ ದಿನಗಳಲ್ಲಿ ನನ್ನ ಕ್ಷೇತ್ರದಲ್ಲೂ ಜನರಿಗೆ ಈ ಸೌಲಭ್ಯ ದೊರೆಯಲಿದೆ. ಕಂದಾಯ ಇಲಾಖೆಗೆ ಸಂಬAಧಿಸಿದ ಎಲ್ಲಾ ಅರ್ಜಿಗಳನ್ನು, ತೊಂದರೆಗಳನ್ನು ಶೀಘ್ರ ಬಗೆಹರಿಸುವಂತೆ ಸೂಚಿಸಲಾಗಿದೆ ಎಂದರು.

ಜನಸ್ಪಂದನ ಸಭೆಯಲ್ಲಿ ಅರ್ಜಿಗಳನ್ನು ನೀಡಿ ಸ್ವೀಕೃತಿ ದಾಖಲೆಗಳನ್ನು ಜನರು ಪಡೆಯಬೇಕು. ಇಲ್ಲಿ ಸಲ್ಲಿಸಿದ ಅಹವಾಲುಗಳನ್ನು ಪರಿಶೀಲನೆ ನಡೆಸಿ ಕಾನೂನಿನ ಚೌಕಟ್ಟಿನಲ್ಲಿ ಇತ್ಯರ್ಥ ಮಾಡಲಾಗುವುದು. ನಾನು ಸಹ ಕಾಲ, ಕಾಲಕ್ಕೆ ಅರ್ಜಿಗಳ ಸ್ಥಿತಿಗತಿಗಳನ್ನು ತಿಳಿದುಕೊಳ್ಳುತ್ತೇನೆ.

ಕನಕಪುರ ತಾಲ್ಲೂಕಿನಲ್ಲಿ 1,16,290 ಮನೆಗಳು ಗೃಹಜ್ಯೋತಿ ಯೋಜನೆಯ ಲಾಭ ಪಡೆದಿವೆ 3,200  ಮನೆಗಳಿಗೆ ಈ ಸೌಲಭ್ಯ ತಾಂತ್ರಿಕ ಕಾರಣಗಳಿಂದ ದೊರೆತಿಲ್ಲ. ಐದು ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಈಡೇರಿಸಿದ್ದು, ಗೃಹಲಕ್ಷ್ಮಿ ಯೋಜನೆಯ ಅಡಿ ಒಂದಷ್ಟು ಜನರಿಗೆ ತಾಂತ್ರಿಕ ಕಾರಣಗಳಿಂದ ಹಣ ಬಂದಿಲ್ಲ.

ಕನಕಪುರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗುತ್ತಿದೆ, ಸ್ವಲ್ಪ ತಡವಾಗಬಹುದು ಆದರೆ ಆದಷ್ಟು ಬೇಗ ಜನರ ಸೇವೆಗೆ ಸಿಗಲಿದೆ. ತಾಯಿ- ಮಕ್ಕಳ ಆಸ್ಪತ್ರೆ ಉದ್ಘಾಟನೆಯಾಗಿ ಆರೋಗ್ಯದ ವಿಚಾರದಲ್ಲಿ ಜನರಿಗೆ ಉತ್ತಮ ಸೌಲಭ್ಯ ದೊರೆಯುತ್ತಿದೆ. ಆದಷ್ಟು ಬೇಗ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ತುಂಬಲಾಗುವುದು.


Share