ರಾಜ್ಯದಲ್ಲಿ ನಾಳೆಯಿಂದ ಲಾಕ್ ಡೌನ್ ಇರುವುದಿಲ್ಲ ಮುಖ್ಯಮಂತ್ರಿ ಸ್ಪಷ್ಟನೆ

Share

ಬೆಂಗಳೂರು: ನಾಳೆಯಿಂದ ಲಾಕ್ ಡೌನ್ ಇರುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಕರ್ನಾಟಕದ ಯಾವುದೇ ಭಾಗದಲ್ಲಿ ಲಾಕ್ ಡೌನ್ ಇರುವುದಿಲ್ಲ, ಕೊರೊನಾ ಸೋಂಕು ನಿಯಂತ್ರಿಸಲು ಲಾಕ್ ಡೌನ್ ಒಂದೇ ಪರಿಹಾರ ಅಲ್ಲ ಇಂದು ಮುಖ್ಯಮಂತ್ರಿಗಳು ನೇರವಾಗಿ ಸಂದರ್ಶನ ಮೂಲಕ ಜನತೆಗೆ ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಇಂದು ರಾಜ್ಯದ ಜನತೆಯನ್ನು ಉದ್ದೇಶಿಸಿ ನೇರವಾಗಿ ಮಾತನಾಡುತ್ತ ಕಂಟೈನ್ ಮೆ೦ಟ್ ಝೂನ್ ನಲ್ಲಿ ಮಾತ್ರ ಲಾಕ್ ಡೌನ್ ಇರುತ್ತದೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ವಿರೋಧ ಪಕ್ಷದ ನಾಯಕರು ನಾಯಕರುಗಳ ಆರೋಪಕ್ಕೆ ಉತ್ತರಿಸಿದ ಅವರು ಯಾರು ಬೇಕಾದರೂ ಬಂದು ಕರೋನಾ ಸಂಬಂಧ ಖರೀದಿಸಿರುವ ಬಗ್ಗೆ ಲೆಕ್ಕ ನೋಡಬಹುದು ಸಂಪೂರ್ಣವಾಗಿ ಪಾರದರ್ಶಕತೆ ಯಲ್ಲಿ ಇದೆ ಎಂದು ಅವರು ಪ್ರಾರ್ಥಿಸಿದರು. ಇಲ್ಲಿಯವರೆಗೂ ವಿರೋಧ ಪಕ್ಷದವರು, ಸಾರ್ವಜನಿಕರು, ಮಾಧ್ಯಮದವರು, ನೀಡಿದ ಸಹಕಾರ ಮುಂದೆ ಕೂಡ ನೀಡಬೇಕು ಎಂದು ಅವರು ಮನವಿ ಮಾಡಿದರು.

ಮುಖ್ಯಮಂತ್ರಿಯವರ ನೇರಪ್ರಸಾರದ ಭಾಷಣದ ವಿವರ

ಬೆಂಗಳೂರು: ಮಹಮಾರಿ ಕರೊನಾ ವೈರಸ್​ ಕಟ್ಟಿಹಾಕಲು ಲಾಕ್​ಡೌನ್​ ಒಂದೇ ಪರಿಹಾರವಲ್ಲ. ಈ ಹೋರಾಟದಲ್ಲಿ ಜನರು ಸಹ ಸಹಕಾರ ನೀಡಬೇಕೆಂದು ಮನವಿ ಮಾಡಿದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಇನ್ಮುಂದೆ ರಾಜ್ಯದಲ್ಲಿ ಲಾಕ್​ಡೌನ್ ವಿಸ್ತರಣೆ ಇಲ್ಲ ಎಂದರು.

ಇಂದು ಸಂಜೆ 5 ಗಂಟೆಗೆ ಫೇಸ್​ಬುಕ್​ ಲೈವ್​ನಲ್ಲಿ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು​ ದೇಶದೆಲ್ಲೆಡೆ ಕರೊನಾ ವೈರಸ್​ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಕೋವಿಡ್​ ನಿಯಂತ್ರಣ ಮಾಡುವುದರಲ್ಲಿ ಪ್ರಾರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದರೆ, ಇತ್ತೀಚಿನ ದಿನಗಳಲ್ಲಿ ಬೆಂಗಳೂಡು ಹಾಗೂ ರಾಜ್ಯದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಲ್ಲಿ ನಾನು ಪ್ರಾರ್ಥನೆ ಮಾಡಿಕೊಳ್ಳುವುದೇನೆಂದರೆ, ಇದನ್ನು ತೊಲಗಿಸಲು ಲಾಕ್​ಡೌನ್​ ಒಂದೇ ಪರಿಹಾರವಲ್ಲ. ಜನರು ಕೋವಿಡ್​ ತೊಲಗಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು.

ಮಾಸ್ಕ್​ಗಳನ್ನು ಪ್ರತಿಯೊಬ್ಬರು ಧರಿಸಬೇಕು ಎಂದು ಮನವಿ ಮಾಡಿದರು.

ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ಡೌನ್ ಇಲ್ಲ. ಅರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸುವುದು ಮುಖ್ಯ. ನಿಯಮ ಪಾಲಿಸಿ ಎಂದು ಮನವಿ ಮಾಡಿದ ಸಿಎಂ ಬಿಎಸ್​ವೈ, ನಿಯಮ ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಹಿರಿಯ ನಾಗರಿಕರು ಎಚ್ಚರಿಕೆಯಿಂದ ಮನೆಯಲ್ಲೇ ಇರಿ ಎಂದರು. ಕೋವಿಡ್​ಗೆ ಲಾಕ್ಡೌನ್ ಪರಿಹಾರವಲ್ಲ. ಹೀಗಾಗಿ ಕರ್ನಾಟಕದಲ್ಲಿ ಲಾಕ್ಡೌನ್ ಇಲ್ಲ. ಕಂಟೈನ್ಮೆಂಟ್ ಝೋನ್​ನಲ್ಲಿ ಮಾತ್ರ ಬಿಗಿ ಕ್ರಮ ಕೈಗೊಳ್ಳುತ್ತೇವೆ. ಇಲ್ಲಿ ಒಂದು ರಸ್ತೆಯಿಂದ ಮತ್ತೊಂದು ರಸ್ತೆಗೆ ಹೋಗಲು ಅವಕಾಶ ಇಲ್ಲ. ಹೀಗಾಗಿ ಪೊಲೀಸರಿಗೆ ಸಹಕಾರ ಕೊಡುವಂತೆ ಮನವಿ ಮಾಡಿದರು.

ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ನೀವು ಎಷ್ಟರಮಟ್ಟಿಗೆ ಕಟ್ಟುನಿಟ್ಟಾಗಿ ಪಾಲನೇ ಮಾಡ್ತಿರೋ ಅಷ್ಟರಮಟ್ಟಿಗೆ ಕೋವಿಡ್​ ತಡೆಯಲು ನಮ್ಮಿಂದ ಸಾಧ್ಯ. ಈಗಾಗಲೇ ನಮ್ಮೆಲ್ಲ ಸಚಿವರು, ಶಾಸಕರು, ವೈದ್ಯರು, ನರ್ಸ್​ಗಳು, ಪೊಲೀಸರು ಹಾಗೂ ಆಶಾ ಕಾರ್ಯಕರ್ತರು ಕೋವಿಡ್​ ತಡೆಯಲು ತಮ್ಮ ಜೀವವನ್ನೇ ಪಣವಾಗಿಟ್ಟು ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ, ನಾವು ಬದುಕುಳಿಯಬೇಕಾದರೆ, ಅಂತರ ಕಾಯ್ದುಕೊಳ್ಳುವುದು, ಮಾಸ್ಕ್​ ಕಡ್ಡಾಯವಾಗಿ ಧರಿಸುವುದು ಮುಂತಾದ ಕ್ರಮಗಳನ್ನು ಪಾಲಿಸುವುದರಿಂದ ಕರೊನಾ ತಡೆಯಲು ಸಾಧ್ಯ ಎಂದು ತಿಳಿಸಿದರು.

ಕೋವಿಡ್​ ನಿಯಂತ್ರಣಕ್ಕೆ ತಜ್ಞರು ಕೊಟ್ಟಿರುವ 5ಟಿ ತಂತ್ರಗಳು ಬಹಳ ಮುಖ್ಯವಾಗಿವೆ. ಅವುಗಳೆಂದರೆ ಟ್ರೇಸ್​ (ಪತ್ತೆ), ಟ್ರ್ಯಾಕ್​ (ಹುಡುಕು), ಟೆಸ್ಟ್​ (ಪರೀಕ್ಷೆ), ಟ್ರೀಟ್​ (ಚಿಕಿತ್ಸೆ) ಹಾಗೂ ಟೆಕ್ನಾಲಜಿ (ತಂತ್ರಜ್ಞಾನ) ತಂತ್ರಗಳನ್ನು ಅಳವಡಿಸಿಕೊಳ್ಳುವುದರಲ್ಲಿ ರಾಜ್ಯ ಈಗಾಗಲೇ ಮುಂಚೂಣಿಯಲ್ಲಿದೆ. ಇದರಿಂದ ಕೋವಿಡ್​ ತಡೆಯಲು ಸಾಧ್ಯ ಎಂಬುದು ನನ್ನ ನಂಬಿಕೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪತ್ತೆಯಾಗಿರುವ ಶೋಂಕಿತರಲ್ಲಿ ಶೇ.80ಕ್ಕೂ ಹೆಚ್ಚು ಸೋಂಕಿತರಲ್ಲಿ ಯಾವುದೇ ರೋಗ ಲಕ್ಷಣಗಳು ಇಲ್ಲ. ಇಂತಹ ಲಘು ರೋಗ ಲಕ್ಷಣ ಇರುವವರಿಗೆ ಆಸ್ಪತ್ರೆಯ ಅವಶ್ಯಕತೆ ಇಲ್ಲ ಎಂಬುದನ್ನು ರಾಜ್ಯದ ಜನ ಮನವರಿಕೆ ಮಾಡಿಕೊಳ್ಳಬೇಕು. ಅಂತಹವರನ್ನು ಮನೆಯಲ್ಲಿ ಅಥವಾ ಕೋವಿಡ್​ ಕೇರ್​ ಕೇಂದ್ರದಲ್ಲಿ ಪ್ರತ್ಯೇಕವಾಗಿ ಇರಿಸಲಾಗುವುದು. ಸೋಂಕಿತರಲ್ಲಿ ಶೇ. 5 ರಷ್ಟು ಮಂದಿಗೆ ಮಾತ್ರ ಐಸಿಯು ಅಥವಾ ವೆಂಟಿಲೇಟರ್​ ಅಗತ್ಯವಿದೆ ಎಂಬುದು ಈಗಾಗಲೇ ಅನುಭವಕ್ಕೆ ಬಂದಿರುವ ಮಾತು. ಬೆಂಗಳೂರಿನಲ್ಲಿ ಕೋವಿಡ್​ ಚಿಕಿತ್ಸೆಗೆ ಈಗಾಗಲೇ 11230 ಹಾಸಿಗೆಗಳನ್ನು ಮೀಸಲಿಟ್ಟಿದ್ದೇವೆ ಎಂದರು.

ಕೋವಿಡ್ ನಿಯಂತ್ರಣ ಮಾಡಲು ಸರ್ಕಾರ ಸರ್ವ ರೀತಿಯಲ್ಲೂ ಕೆಲಸ ಮಾಡ್ತಿದೆ. ಆತ್ಮಹತ್ಯೆಯಂತಹ ಆತುರದ ನಿರ್ಧಾರ ಬೇಡವೆಂದು ಜನರಲ್ಲಿ ಮನವಿ ಮಾಡಿದ ಬಿಎಸ್​ವೈ, ಮಹಾರಾಷ್ಟ್ರ, ತಮಿಳುನಾಡಿನಿಂದ ಬಂದ ಜನರಿಂದ ಪ್ರಕರಣಗಳು ಹೆಚ್ಚಾಗಿವೆ ಎಂದರು. ಖಾಸಗಿ ಆಸ್ಪತ್ರೆಗಳ ವಿಚಾರದಲ್ಲಿ ಗೊಂದಲ ಇದ್ದದ್ದು ನಿಜ. ಶೇಕಡಾ 50 ಖಾಸಗಿ ಆಸ್ಪತ್ರೆಗಳು ಬೆಡ್ ಕೊಡಲು ಒಪ್ಪಿಗೆ ಸೂಚಿಸಿದ್ದಾರೆ ಹಾಗೂ ಇನ್ಮಂದೆ 24 ಗಂಟೆಯಲ್ಲಿ ಟೆಸ್ಟ್ ರಿಸಲ್ಟ್ ಸಿಗುತ್ತದೆ ಎಂದರು ತಿಳಿಸಿದರು.

ಬೆಂಗಳೂರಿನ ಎಂಟು ದಿಕ್ಕುಗಳಿಗೆ ಎಂಟು ಜನರಿಗೆ ಜವಾಬ್ದಾರಿ ಮತ್ತು ಬಿಬಿಎಂಪಿ ಅಧಿಕಾರಿ ನೇಮಕ ಮಾಡಲಾಗಿದೆ. ಅಲ್ಲದೆ, ಕೆಲ ಜಿಲ್ಲೆಗಳಲ್ಲಿ ಕರೊನ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಡಿಸಿಗಳಿಗೆ ಸೂಚನೆ ನೀಡಿದ್ದೇನೆ. ಬೆಂಗಳೂರು ಸೇರಿದಂತೆ ಎಲ್ಲ ಕಡೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಲಾಕ್​ಡೌನ್​ ವಿಸ್ತರಣೆ ಮಾಡುವುದಿಲ್ಲ ಎಂದು ಬಿಎಸ್​ವೈ ಹೇಳಿದರು.


Share