ರಾಜ್ಯದಲ್ಲಿ ಲಾಕ್ಡೌನ್ ಇಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ .

ಬೆಂಗಳೂರು ರಾಜ್ಯದಲ್ಲಿ ಯಾವುದೇ ಕಾರಣದಿಂದ ಲಾಕ್ಡೌನ್ ಮಾಡುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಅವರು ಇಂದು ಬೆಳಗ್ಗೆ ಸರ್ವಪಕ್ಷಗಳ ಸಭೆಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ ಹೀಗಾಗಿ ಲಾಕ್ ಡೌನ್ ಮತ್ತೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಂದಾಯ ಸಚಿವ ಅಶೋಕ್ ಅವರು ಇದೇ ಸಂಬಂಧ ಮಾತನಾಡಿ ಲಾಕ್ಡೌನ್ ಮಾಡುವುದಿಲ್ಲ ಎಂದು ಸಭೆಗೆ ಮುನ್ನ ಸುದ್ದಿಗಾರರೊಂದಿಗೆ ತಮ್ಮ ಅಭಿಪ್ರಾಯ ತಿಳಿಸಿದ್ದರು. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ಅಂತಿಮ ನಿರ್ಧಾರ ಪ್ರಕಟವಾಗಿ ಲಾಕ್ ಡೌನ್ ರಾಜ್ಯದಲ್ಲಿ ಆಗುತ್ತೋ ಇಲ್ಲವೋ ಎಂಬುದರ ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ