ರಾಜ್ಯದ ಹಲವೆಡೆ ಮಳೆಯ ಮುನ್ಸೂಚನೆ

Share

ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Share