ರಾಜ್ಯಸರ್ಕಾರಕ್ಕೆ ನಾಚಿಕೆ ಇಲ್ವಾ ಕೆಪಿಸಿಸಿ ಅಧ್ಯಕ್ಷ , ಗರಂ

ಬೆಂಗಳೂರು ರಾಜ್ಯ ಬಿಜೆಪಿ ಸರ್ಕಾರ ಕೊರೋನ ಹೆಣದ ಮೇಲೆ ಹಣ ಮಾಡಲು ಹೊರಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರು ಇಂದು ಬೆಳಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಪತ್ರಿಕಾಗೋಷ್ಠಿಯ ನಂತರ ಡಿ.ಕೆ. ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಕಾಂಗ್ರೆಸ್ ಪಕ್ಷ ಆಡಳಿತ ಪಕ್ಷಕ್ಕೆ ಯಾವಾಗ ಸಹಕಾರ ನೀಡಿಲ್ಲ ಎಂದು ಮುಖ್ಯಮಂತ್ರಿ ತಿಳಿಸಲೆಂದು ಸವಾಲು ಹಾಕಿದ್ದಾರೆ. ವಿರೋಧ ಪಕ್ಷವನ್ನು ರಾಜ್ಯಸರ್ಕಾರ ಸಹಕಾರ ಕೇಳುತ್ತಿದೆ ರಾಜ್ಯ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದರು.
ಅಕ್ರಮ ನಡೆಸಿರುವ ಅಧಿಕಾರಿಗಳ ಮೇಲೆ ಯಾವ ಕ್ರಮವೂ ತೆಗೆದುಕೊಂಡಿಲ್ಲ, ಮೊಕದ್ದಮೆ ದಾಖಲೆ ಮಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾಂಗ್ರೆಸ್ ಪಕ್ಷ ರಾಜ್ಯಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ಈಗಾಗಲೇ ನೀಡಿದೆ ಮುಂದೆ ಕೂಡ ಕೊರೋನ ಸಮಸ್ಯೆ ನಿವಾರಣೆಗೆ ಕಾಂಗ್ರೆಸ್ ಪಕ್ಷ ಸದಾ ಆಡಳಿತದ ಪಕ್ಷದ ಜೊತೆಗೆ ಕೈಜೋಡಿಸಲಿದೆ ಅದರಲ್ಲಿ ರಾಜ್ಯಸರ್ಕಾರಕ್ಕೆ ಸಂಶಯಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.