ವಿಮಾ ಸೌಲಭ್ಯಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

ಮೈಸೊರು ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಅಭಿರಾಮ್ ಜಿ. ಶಂಕರ್ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಭೇಟಿ ಮಾಡಿ, ಪಿರಿಯಾಪಟ್ಟಣ ತಾಲ್ಲೂಕು ಬೆಟ್ಟದಪುರ ಹೋಬಳಿಯಲ್ಲಿ ರಾಜಸ್ವ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಚ್.ಆರ್. ಗೌರೀಶ್ ರವರು ಹೃದಯಾಘಾತದಿಂದ ನಿಧನ ಹೊಂದಿರುವುದರಿಂದ, ಅವರಿಗೆ ವಿಮಾ ಸೌಲಭ್ಯ ಕಲ್ಪಿಸಿಕೊಡುವ ಬಗ್ಗೆ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ನಮ್ಮ ಮನವಿಯನ್ನು ಕಳುಹಿಸಿಕೊಡಲು ನಿಕಟಪೂರ್ವ ರಾಜ್ಯಾಧ್ಯಕ್ಷರೂ ಹಾಗೂ ಜಿಲ್ಲಾಧ್ಯಕ್ಷರಾದ ಹೆಚ್.ಕೆ. ರಾಮುರವರು, ಕಾರ್ಯದರ್ಶಿ ಗೋವಿಂದರಾಜ್ ಜೆ., ಖಜಾಂಚಿ ರಮೇಶ್ ಕುಮಾರ್ ಹಾಗೂ ಕಂದಾಯ ಇಲಾಖೆಯ ಗ್ರಾಮ ಲೆಖ್ಖಾಧಿಕಾರಿ ಹಾಗೂ ಜಿಲ್ಲಾ ಸಂಘದ ಜಂಟಿಕಾರ್ಯದರ್ಶಿ ಭಾಸ್ಕರ್ ರವರು ಮನವಿ ಸಲ್ಲಿಸಿದರು.