ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ

Share

ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ
ಮೈಸೂರುು ಕೋವಿಡ್-19 ಸೋಂಕು ತಡೆಗಟ್ಟುವ ಕಾರ್ಯದಲ್ಲಿ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧೆಡೆ ಆರೋಗ್ಯ ಇಲಾಖೆ ವತಿಯಿಂದ ಕೈಗೊಂಡಿರುವ ಪರೀಕ್ಷೆ ಕಾರ್ಯದಲ್ಲಿ ಕೆಲವು ಸಾರ್ವಜನಿಕರು ಅನಗತ್ಯವಾಗಿ ವೈದ್ಯರ ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಇದು ಅತ್ಯಂತ ಗಂಭೀರ ಸ್ವರೂಪದಾಗಿರುವುದರಿಂದ ಇಂತಹ ಪ್ರಕರಣದಲ್ಲಿ ಭಾಗಿ ಆಗುವವರ ವಿರುದ್ಧ ತೀವ್ರ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿರುತ್ತಾರೆ


Share