ತಿರುವನಂತಪುರಂ: ತಿರುಚಿನಾಪಲ್ಲಿಯಿಂದ ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ತಾಂತ್ರಿಕ ಕಾರಣಗಳಿಂದ ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ವಿಮಾನವು ತಮಿಳುನಾಡಿನ ತಿರುಚಿನಾಪಲ್ಲಿಯಿಂದ ಬೆಳಿಗ್ಗೆ 10:45 ರ ಸುಮಾರಿಗೆ ಹೊರಟ ನಂತರ ವಿಮಾನ ನಿಲ್ದಾಣ ಪ್ರಾಧಿಕಾರವು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಿತು.
ವಿಮಾನವು ತಿರುವನಂತಪುರಂನಲ್ಲಿ ಮಧ್ಯಾಹ್ನದ ಸುಮಾರಿಗೆ ಸುರಕ್ಷಿತವಾಗಿ ಇಳಿಯಿತು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ವಿಮಾನದಲ್ಲಿ 154 ಪ್ರಯಾಣಿಕರಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
* ಸಾಂದರ್ಭಿಕ ಚಿತ್ರ