ಸಚಿವರಿಂದ ವಿಶ್ವ ದಿನಾಚರಣೆ

ವಿಶ್ವ ಜನಸಂಖ್ಯೆ ದಿನಾಚರಣೆ
ಮೈಸೂರು,ಜುಲೈ11(ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ವತಿಯಿಂದ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯೆ ದಿನಾಚರಣೆ-2020 ರ ಅಂಗವಾಗಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜನ ಸಂಖ್ಯಾ ಸ್ಫೋಟದ ವಿರುದ್ಧ ಜಾಗೃತಿ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.