ಸಚಿವರ ಶುಭಾಶಯ

513
Share

ನಮಸ್ಕಾರ ಎಲ್ಲರಿಗೂ ನಾಡಪ್ರಭು ಕೆಂಪೇಗೌಡ ಜಯಂತಿಯ ಶುಭಾಶಯಗಳು

ಕರ್ನಾಟಕಕ್ಕೆ ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರ. ಅವರ ದೂರದೃಷ್ಟಿಯ ಫಲವನ್ನು ಇಂದು ನಾವುಗಳು ಅನುಭವಿಸುತ್ತಿದ್ದೇವೆ. ಅವರು ಅಂದು ನಿರ್ಮಿಸಿದ ಬೆಂಗಳೂರು ನಗರವು ಇಂದು ಕರ್ನಾಟಕ ರಾಜಧಾನಿಯಾಗಿ ವಿಸ್ತೃತವಾಗಿ ಬೃಹತ್ ಪ್ರಮಾಣದಲ್ಲಿ ಬೆಳೆದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸುವಂತಾಗಿದೆ. ಅವರು ನಿರ್ಮಿಸಿದ ಅನೇಕ ಕೆರೆ, ದೇವಾಲಯಗಳ, ಕೋಟೆ ಕೊತ್ತಲಗಳು ಅವರ ಸಮಾಜಮುಖಿ ಕಾರ್ಯವೈಖರಿಗೆ ನಿದರ್ಶನ. ಇಂತಹ ಮಹಾನೀಯರನ್ನು ನೆನೆಯುವುದು ನಮ್ಮ ಕರ್ತವ್ಯ ಕೂಡಾ. ಇದಕ್ಕೆಂದೇ ಪ್ರತಿ ವರ್ಷ ಸರ್ಕಾರದ ವತಿಯಿಂದ ಕೆಂಪೇಗೌಡರ ಜಯಂತಿಯನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ಇದೇ ಜೂನ್ ೨೭ ರಂದು ಮೈಸೂರಿನಲ್ಲಿ ನಡೆಯುತ್ತಿರುವ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ನನಗೆ ಪಾಲ್ಗೊಳ್ಳಲು ಸಾಧ್ಯವಾಗದಿರುವ ಬಗ್ಗೆ ಬೇಸರವಿದೆ. ಆಶಾಕಾರ್ಯಕರ್ತೆಯರಿಗೆ ಸಹಾಯಧನ ವಿತರಣೆ ಹಾಗೂ ಡಿಸಿಸಿ ಬ್ಯಾಂಕ್ ಪ್ರಗತಿ ಪರಿಶೀಲನೆ ಸಂಬಂಧ ಅಂದು ನಾನು ರಾಜ್ಯ ಪ್ರವಾಸದಲ್ಲಿರುವ ಕಾರಣ ಕಾರ್ಯಕ್ರಮಕ್ಕೆ ಬರಲಾಗುತ್ತಿಲ್ಲ. ಆದರೆ, ನಿಗದಿತ ಕಾರ್ಯಕ್ರಮಗಳು ಎಂದಿನಂತೆ ನಡೆಯಲಿದ್ದು, ಈ ಸಂದರ್ಭದಲ್ಲಿ ಜಿಲ್ಲೆಯ ಹಾಗೂ ನಾಡಿನ ಜನತೆಗೆ ನಾಡಪ್ರಭು ಕೆಂಪೇಗೌಡರ ಜಯಂತಿಯ ಶುಭಾಶಯಗಳನ್ನು ಕೋರುತ್ತೇನೆ.

  ವಂದನೆಗಳೊಂದಿಗೆ                    (ಎಸ್.ಟಿ. ಸೋಮಶೇಖರ್) 


ಮೈಸೂರು ಜಿಲ್ಲೆಯ ಸಮಸ್ತ ಜನತೆಗೆ ಮತ್ತು ನಾಗರಿಕ ಬಂಧುಗಳಿಗೆ


Share