ಮೈಸೂರು
ರಾಜ್ಯ ಸರ್ಕಾರ ಬ್ರಾಹ್ಮಣ ಸಮುದಾಯಕ್ಕೆ ಜಾತಿ ಪತ್ರ ನೀಡುವುದರ ಬಗ್ಗೆ ಸರಕಾರ ಆದೇಶ ಹೊರಡಿಸಿರುವುದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ. ಟಿ. ಪ್ರಕಾಶ್ ಅವರು ಸ್ವಾಗತಿಸಿದ್ದಾರೆ. ಮೈಸೂರ್ ಪತ್ರಿಕೆಗೆ ಸಂದರ್ಶನ ನೀಡಿದ ಡಿ.ಟಿ. ಪ್ರಕಾಶ ರವರು ಮಾತನಾಡುತ್ತಾ
ಬ್ರಾಹ್ಮಣ ಸಮುದಾಯದವರು ಹಲವಾರು ವರ್ಷಗಳಿಂದ ಜಾತಿ ಪತ್ರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದರು, ಸರ್ಕಾರ ಗಂಭೀರವಾಗಿ ಪರಿಗಣಿಸಿರಲಿಲ್ಲ ಇಂದಿನ ಸರ್ಕಾರ ಬ್ರಾಹ್ಮಣರ ಒತ್ತಾಯವನ್ನು ಪರಿಗಣಿಸಿ ಆದೇಶ ಹೊರಡಿಸಿದೆ ಎಂದರು. ಮೈಸೂರು ನಗರ ಜಿಲ್ಲಾ ಬ್ರಾಹ್ಮಣರ ಅಧ್ಯಕ್ಷರಾಗಿ ತಾವು ಆಯ್ಕೆಯಾದ ಮೇಲೆ ಸರ್ಕಾರಕ್ಕೆ ಒತ್ತಡ ಹೇರಲು ಯತ್ನಿಸಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 2018ರಲ್ಲಿ ಡಿಟಿ ಪ್ರಕಾಶ್ ಅವರ ಮುಂದಾಳತ್ವದಲ್ಲಿ ಗಣಪತಿ ಸಚ್ಚಿದಾನಂದ ಆಶ್ರಮದ ಸಹಯೋಗದೊಂದಿಗೆ ನಡೆದ ಬ್ರಾಹ್ಮಣರ ಸಮಾವೇಶದಲ್ಲಿ ಸರ್ಕಾರ ಬ್ರಾಹ್ಮಣರಿಗೆ ಜಾತಿ ಪತ್ರ ನೀಡುವಂತೆ ಒತ್ತಾಯಿಸಿ ನಿರ್ಣಯ ಮಂಡಿಸಲಾಯಿತು . ಈ ಸಂದರ್ಭದಲ್ಲಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಬೆಂಬಲವಾಗಿ ನಿಂತು ಸರ್ಕಾರಕ್ಕೆ ಮನವಿ ಮಾಡಿದ್ದರು ಎಂದು ಅವರು ಹೇಳಿದರು. ಇಂದಿನ ಪರಿಸ್ಥಿತಿಯಲ್ಲಿ ಸರ್ಕಾರದಲ್ಲಿ ಕೆಲಸ ಆಗಬೇಕಾದರೆ ಜಾತಿ ಪತ್ರ ಕಡ್ಡಾಯವಾಗಿ ಬೇಕೇ ಬೇಕು. ಸರ್ಕಾರ ಕೈಗೊಂಡಿರುವ ನಿರ್ಧಾರ ವರದಾನವಾಗಲಿದೆ ಎಂದು ಪ್ರಕಾಶ್ ಅವರು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.