ಜೂನ್, 4 ಮತ್ತು 5 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ
ಎಸ್ಸೆಸ್ಸೆಲ್ಸಿ ಪರೀಕ್ಷೆ; ಸಹಾಯವಾಣಿ ಆರಂಭ ****************** ಮಡಿಕೇರಿ ಜೂ.02(ಕರ್ನಾಟಕ ವಾರ್ತೆ):- ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಜೂನ್ 25 ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ಯಾವುದೇ ಸಮಸ್ಯೆ ಹಾಗೂ ಪ್ರಶ್ನೆಗಳು ಇದ್ದಲ್ಲಿ ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ 08272-228337, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಡಿಕೇರಿ ಕಚೇರಿ 08272-225664, 9980669032, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೋಮವಾರಪೇಟೆ 08276-282162, 9480423363, ಕ್ಷೇತ ಶಿಕ್ಷಣಾಧಿಕಾರಿಗಳು ವಿರಾಜಪೇಟೆ 08274-257249, 9480309481 ಈ ಸಹಾಯವಾಣಿ ಸಂಖ್ಯೆ ಮತ್ತು ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೊ ಅವರು ತಿಳಿಸಿದ್ದಾರೆ. ಮಡಿಕೇರಿ ಜೂ.02(ಕರ್ನಾಟಕ ವಾರ್ತೆ):-ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಜೂನ್, 4 ಮತ್ತು 5 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಜೂನ್, 04 ರಂದು ಬೆಳಗ್ಗೆ 11 ಗಂಟೆಗೆ ಜಂಬೂರು ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ನಿರ್ಮಿಸಿದ ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12.30 ಗಂಟೆಗೆ ಮದೆ ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ನಿರ್ಮಿಸಿದ ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ 2ನೇ ಮೊಣ್ಣಂಗೇರಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಜೂನ್, 05 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೈಗಾರಿಕಾ ಬಡಾವಣೆಯ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ಅವರು ತಿಳಿಸಿದ್ದಾರೆ.