ಸಿದ್ದರಾಮಯ್ಯ ಅವರಿಗೆ ನನ್ನ ಕಂಡರೆ ಹೆಚ್ಚಿಗೆ ಭಯ ಹೆಚ್ಡಿಕೆ

Share

ಬೆಂಗಳೂರು ಸಿದ್ದರಾಮಯ್ಯನವರಿಗೆ ನನ್ನ ಕಂಡರೆ ಹೆಚ್ಚು ಭಯ ಇದೆ ಎಂದು ಜೆಡಿಎಸ್ ಮುಖಂಡ ಹೆಚ್ ಡಿ ಕುಮಾರಸ್ವಾಮಿ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯನವರಿಗೆ ಬಿಜೆಪಿ ಪಕ್ಷಕ್ಕಿಂತಲೂ ಜೆಡಿಎಸ್ ಕಂಡರೆ ಭಯ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
ಸಿದ್ದರಾಮಯ್ಯನವರು ಪದೇಪದೇ ನಮ್ಮನ್ನು ಕೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ ನಾವು ಸಿದ್ದರಾಮಯ್ಯನವರ ಬಗ್ಗೆ ಮಾತನಾಡಬಾರದು ಎಂದು ತೀರ್ಮಾನಿಸಿದ್ದರು ಪದೇಪದೇ ಕೇಳುತ್ತಿರುವ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ಜಾತಿ ಹೆಸರು ಹೇಳಿ ರಾಜಕಾರಣ ಅಥವಾ ಮತ ಕೇಳುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.


Share