ಸಿದ್ದರಾಮಯ್ಯ ಸ್ವಯಂ ಘೋಷಿತ ಅಹಿಂದ ನಾಯಕ

Share

 

ಮೈಸೂರು; ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಯಂ ಘೋಷಿತ ಅಹಿಂದ ನಾಯಕನೇ ವಿನಹ ನಿಜವಾದ ಅಹಿಂದ ನಾಯಕರಲ್ಲ, ಅವರು ಕೇವಲ ಮುಸಲ್ಮಾನರ ಏಜೆಂಟ್ ಎಂದು ಬಿಜೆಪಿಯ ರಾಷ್ಟ್ರೀಯ ವಕ್ತಾರರಾದ ರಾಜ್ಯಸಭಾ ಸದಸ್ಯ ಸುಧಾಂಶು ತ್ರೀವೇಧಿ ವಾಗ್ದಾಳಿ ನಡೆಸಿದರು.

ಬುಧವಾರ ಮೈಸೂರಿನ ವಾಣಿವಿಲಾಸ ರಸ್ತೆಯಲ್ಲಿರುವ ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಹಿಂದ ನಾಯಕ ಎಂದು ಕರೆಯಿಸಿಕೊಳ್ಳುವ ಸಿದ್ದರಾಮಯ್ಯ ದಲಿತರು, ಹಿಂದುಳಿದ ವರ್ಗದವರ ಅಭಿವೃದ್ಧಿಗಾಗಿ ಏನನ್ನೂ ಮಾಡಲಿಲ್ಲ. ಕೇವಲ ಮುಸ್ಲಿಮರ ಓಲೈಸುವ ಏಜೆಂಟರಾಗಿ ಕೆಲಸ ಮಾಡಿದರು. ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರ ಅಭಿವೃದ್ಧಿಗಾಗಿ ಪರಿಣಾಮಕಾರಿಯಾದ ಯಾವುದೇ ಯೋಜನೆಗಳನ್ನು ಜಾರಿಮಾಡಲಿಲ್ಲ. ಈ ಸಮುದಾಯಗಳ ಬೇಡಿಕೆಯಾದ ಮೀಸಲಾತಿಯನ್ನು ಹೆಚ್ಚಿಸಲಿಲ್ಲ. ಈ ಸಮುದಾಯಗಳನ್ನು ಕಾಂಗ್ರೆಸ್ ಸರ್ಕಾರ ರಾಜಕೀಯ ಲಾಭಕ್ಕಾಗಿ, ವೋಟ್ ಬ್ಯಾಂಕ್‌ಗಾಗಿ ಬಳಸಿಕೊಂಡು, ಸಮುದಾಯಗಳ ಅಭಿವೃದ್ಧಿಯನ್ನು ಕಡೆಗಣಿಸಿದೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ವೀರಶೈವ ಹಾಗೂ ಒಕ್ಕಲಿಗ ಸಮುದಾಯಕ್ಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಹೆಚ್ಚಿಸಿದೆ. ಈ ಸಮುದಾಯಗಳ ಬಹು ವರ್ಷಗಳ ಬೇಡಿಕೆಗಳನ್ನು ಈಡೇರಿಸುವ ಮೂಲಕ ಸಾಮಾಜಿಕ ನ್ಯಾಯವನ್ನು ನೀಡಿದೆ. ಮುಸ್ಲಿಮರಿಗೆ ಕಾಂಗ್ರೆಸ್ ಸರ್ಕಾರ ಸಂವಿಧಾನ ಬಾಹಿರವಾಗಿ, ಕಾನೂನು ಬಾಹಿರವಾಗಿ ನೀಡಿದ್ದ ಮೀಸಲಾತಿಯನ್ನು ರದ್ದು ಮಾಡಿ, ಅವರನ್ನೂ ಕೂಡ ಡಬ್ಲೂ ಸ್ಗೆ ಸೇರಿಸಿದೆ. ಎಲ್ಲಾ ಸಮುದಾಯಗಳ ಅಭಿವೃದ್ಧಿಗೂ ಬಿಜೆಪಿ ಸರ್ಕಾರ ಆದ್ಯತೆಯನ್ನು ನೀಡಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯನ ಐದು ವರ್ಷಗಳ ಆಡಳಿತದ ಕಾಲದಲ್ಲಿ ಬೆಂಗಳೂರು ಹಾಗೂ ರಾಜ್ಯ ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಕಾಣಲಿಲ್ಲ. ಮೈಸೂರು ಕೂಡ ಅಭಿವೃದ್ಧಿಯಾಗಲಿಲ್ಲ. ಆದರೆ ನರೇಂದ್ರ ಮೋದಿ ಸರ್ಕಾರ ಸಾವಿರಾರು ಮಂದಿಗೆ ಉದ್ಯೋಗ ಒದಗಿಸುವ ಮೈಸೂರಿಗೆ ಸೆಮಿ ಕಂಡಕ್ಟರ್ ಹಬ್‌ನ್ನು ಮೈಸೂರಿನಲ್ಲಿ ಸ್ಥಾಪಿಸುತ್ತಿದೆ. ಮೈಸೂರನ್ನು ಗ್ಲೋಬಲ್ ಸೆಂಟರ್‌ನ್ನಾಗಿ ಮಾಡಲಾಗುತ್ತಿದೆ. ಮೈಸೂರು-ಬೆಂಗಳೂರು ದಶಪಥ ರಸ್ತೆಯನ್ನು ಅಭಿವೃದ್ಧಿ ಮಾಡಿ ಉದ್ಘಾಟಿಸಿದೆ. ಮೈಸೂರು ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳ ಅಭಿವೃದ್ಧಿಯನ್ನು ಮಾಡುತ್ತಿದೆ. ರೈಲುಗಳನ್ನು ವಿದ್ಯುತ್ ಚಾಲಿತವನ್ನಾಗಿ ಮಾಡುವ ಕೆಲಸ ಶೇ 90ರಷ್ಟು ಪೂರ್ಣಗೊಂಡಿದೆ. ಮೈಸೂರಿನ ನಾಗನಹಳ್ಳಿಯಲ್ಲಿ ಹೊಸ ರೈಲು ನಿಲ್ದಾಣ ನಿರ್ಮಿಸಲಾಗುತ್ತಿದೆ. ವಂದೇ ಭಾರತ್ ರೈಲು ಸಂಚಾರವನ್ನು ಪ್ರಾರಂಭಿಸಲಾಗಿದೆ. ರಾಜ್ಯದಲ್ಲಿರುವ ಎಲ್ಲಾ ರೈಲು ನಿಲ್ದಾಣಗಳನ್ನು ಅಭಿವೃದ್ಧಿಗೊಳಿಸಿ, ಉನ್ನಿತಕರೀಸಲಾಗುತ್ತಿದೆ. ಆತ್ಮ ನಿರ್ಭರ ಯೋಜನೆಯಡಿ ಮೊಬೈಲ್ ಉತ್ಪಾಧನೆಯನ್ನು ಮಾಡುತ್ತಿದೆ. ಇಡೀ ವಿಶ್ವದಲ್ಲಿ ಚೀನಾ ಬಿಟ್ಟರೆ ಭಾರತವೇ ಇದೀಗ ಅತಿ ಹೆಚ್ಚಾಗಿ ಮೊಬೈಲ್ ಉತ್ಪಾಧನೆ ಮಾಡುವ ವಿಶ್ವದ ಎರಡನೇ ರಾಷ್ಟವಾಗುತ್ತಿದೆ. ಅತಿ ಹೆಚ್ಚಾಗಿ ವಿದೇಶಿ ಬಂಡವಾಳ ಹೂಡಿಕೆದಾರರನ್ನು ಬೆಂಗಳೂರಿಗೆ ಆಕರ್ಷಿಸಿ, ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿಸಲಾಗುತ್ತಿದೆ ಎಂದು ತಿಳಿಸಿದರು.
ಚುನಾವಣೆಗಳು ಹತ್ತಿರ ಬಂದಾಗಲೆಲ್ಲಾ ಕಾಂಗ್ರೆಸ್‌ನವರು ಜನರಿಗೆ ಈಡೇರಿಸಲಾಗದಂತಹ ಆಕರ್ಷಕವಾದ ಸುಳ್ಳು ಭರವಸೆಗಳನ್ನು ನೀಡುವುದು ರೂಡಿ ಮಾಡಿಕೊಂಡು ಬಂದಿದ್ದಾರೆ. ಅದೇ ರೀತಿ ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಿಕೆ, 10 ಕೆ.ಜಿ ಅಕ್ಕಿ, ಗೃಹಿಣಿಗೆ 2 ಸಾವಿರರೂ ಹೀಗೆ ಅನೇಕ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಜನರನ್ನು ಮರಳು ಮಾಡಿ, ಅಧಿಕಾರಕ್ಕೆ ಬರಬೇಕೆಂಬ ಪ್ರಯತ್ನವನ್ನು ಕಾಂಗ್ರೆಸ್‌ನವರು ನಡೆಸುತ್ತಿದ್ದಾರೆ. ಹಿಮಾಚಲ, ರಾಜಸ್ಥಾನ, ಛತ್ತೀಸ್‌ಗಡ್ ಮುಂತಾದ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಇದೇ ರೀತಿಯ ಸುಳ್ಳು ಭರವಸೆಗಳನ್ನ ಚುನಾವಣೆಯ ಸಂದರ್ಭದಲ್ಲಿ ನೀಡಿದ್ದರು, ಆದರೆ ಅಧಿಕಾರಕ್ಕೆ ಬಂದು ಹಲವು ತಿಂಗಳಾದರೂ ನೀಡಿದ್ದ ಭರವಸೆಗಳಲ್ಲಿ ಒಂದನ್ನೂ ಇಲ್ಲಿಯ ತನಕ ಜಾರಿಗೆ ತರಲು ಅವರಿಗೆ ಸಾಧ್ಯವಾಗಿಲ್ಲ. ಹಾಗಾಗಿ ಅಧಿಕಾರಕ್ಕೆ ಬರಲು ಸುಳ್ಳು ಭರವಸೆಗಳನ್ನು ನೀಡುತ್ತಿರುವ ಕಾಂಗ್ರೆಸ್‌ನವರಿಗೆ ಕರ್ನಾಟಕ ರಾಜ್ಯದ ಜನರು ತಕ್ಕ ಪಾಠವನ್ನು ಕಲಿಸಬೇಕು ಎಂದು ಹೇಳಿದರು.

ಕಾಂಗ್ರೆಸ್‌ವರು ಬಿಜೆಪಿ ಸರ್ಕಾರ ಶೇ 40ರಷ್ಟು ಕಮಿಷನ್ ಪಡೆಯುವ ಭ್ರಷ್ಟ ಸರ್ಕಾರ ಎಂದು ಸುಳ್ಳು ¸ ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಈ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲಾತಿಗಳನ್ನು ನೀಡುತ್ತಿಲ್ಲ. ರಾಜೀವ್ ಗಾಂಧಿ ಅವರು ಪ್ರಧಾನಮಂತ್ರಿಯಾಗಿದ್ದಾಗ ಕೇಂದ್ರದಿಂದ ಒಂದು ರೂಪಾಯಿ ಕೊಟ್ಟರೆ ಫಲಾನುಭವಿಗಳಿಗೆ ಕೇವಲ 15 ಪೈಸೆ ಮಾತ್ರ ತಲುಪುತ್ತಿದೆ. ಉಳಿದ 85 ಮಧ್ಯವರ್ತಿಗಳ ಪಾಲಾಗುತ್ತಿದೆ ಎಂದು ಹೇಳಿದರು. ಅವರ ಕಾಲದಿಂದಲೂ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ 85% ಕಮಿಷನ್ ಭ್ರಷ್ಟಾಚಾರ ಇತ್ತು ಎಂಬುದನ್ನು ಸ್ವತಃ ಪ್ರಧಾನಮಂತ್ರಿಗಳಾದಂತಹ ರಾಜೀವ್ ಗಾಂಧಿ ಅವರೇ ಒಪ್ಪಿಕೊಂಡಿದ್ದಾರೆ. ಇದನ್ನು ಕಾಂಗ್ರೆಸ್‌ನವರು ಮಾತ್ರವಲ್ಲ, ಈ ದೇಶದ ಜನರು ಕೂಡ ಅರ್ಥಮಾಡಿಕೊಳ್ಳಬೇಕು. ಕಾಂಗ್ರೆಸ್ ಸರ್ಕಾರಗಳು 85% ಕಮಿಷನ್ ಪಡೆಯುವ ಭ್ರಷ್ಟ ಸರ್ಕಾರಗಳು ಎಂದು ಟೀಕಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಎಂಟು ವರ್ಷಗಳಿಂದ ಡಿಬಿಟಿ ಯ ಮುಖಾಂತರ ನೇರ ನಗದು ವರ್ಗಾವಣೆ ಫಲಾನುಭವಗಳಿಗೆ ತಲುಪುತ್ತಿದ್ದು. ನೂರಕ್ಕೆ ನೂರು ರೂಪಾಯಿ ಫಲಾನುಭವಿಗಳಿಗೆ ಸಿಗುತ್ತಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ತಲುಪುತ್ತಿರುವ ಐತಿಹಾಸಿಕ ದಾಖಲೆ ಎಂದು ತಿಳಿಸಿದರು.
ಕಾಂಗ್ರೆಸ್‌ನವರು ಸರ್ಕಾರದ ಆಡಳಿತದಲ್ಲಿ ಕರ್ನಾಟಕವನ್ನು ಎಟಿಎಂ (ಎನಿ ಟೈಮ್ ಮನಿ ವರ್ಗಾವಣೆ) ಮಾಡಿಕೊಂಡಿದ್ದಾರೆ. ಈಗ ಅಧಿಕಾರಕ್ಕೆ ಬರಲು ಹವಣಿಸುತ್ತಿದ್ದಾರೆ. ಅದಕ್ಕೆ ರಾಜ್ಯದ ಜನರು ಈ ಚುನಾವಣೆಯಲ್ಲಿ ಅವಕಾಶ ನೀಡಬಾರದು. ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬಾರದು ಎಂದರು. ಚುನಾವಣೆಯ ವೇಳೆ ಮಾಜಿ ಸಿಎಂ ಜಗದೀಶ್‌ಶೆಟ್ಟರ್ ಸೇರಿದಂತೆ ಕೆಲವರು ಬಿಜೆಪಿಯನ್ನು ಬಿಟ್ಟು ಹೋಗಿದ್ದಾರೆ. ಇದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಬಿಜೆಪಿ ಕಾರ್ಯಕರ್ತರ ಕೇಡರ್ ಬೇಸಿಸ್ ಆಧಾರಿತ ಪಕ್ಷವಾಗಿದ್ದು, ಯಾವುದೇ ನಾಯಕ, ಮುಖಂಡರು ಪಕ್ಷವನ್ನು ಬಿಟ್ಟು ಹೋದರೂ, ಅದರಿಂದ ಪಕ್ಷಕ್ಕೆ ಯಾವುದೇ ರೀತಿಯ ಹಾನಿ ಆಗುವುದಿಲ್ಲ. ಈ ಹಿಂದೆ ಕಾಂಗ್ರೆಸ್ ಪಕ್ಷವನ್ನು ಬಂಗಾರಪ್ಪ, ಎಸ್ ಎಂ ಕೃಷ್ಣ ಮುಂತಾದವರೆಲ್ಲ ಬಿಟ್ಟು ಬಿಜೆಪಿಗೆ ಬಂದಿದ್ದರು. ಇದೀಗ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಕೂಡ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರಿದ್ದಾರೆ. ಇನ್ನೂ ಹಲವಾರು ನಾಯಕರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬರಲು ಸಿದ್ಧರಿದ್ದಾರೆ ಎಂದರು.
ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲಿ ಯಾವ ದಲಿತ ನಾಯಕರನ್ನು ಬೆಳೆಯಲು ಬಿಡುತ್ತಿಲ್ಲ ಡಾ .ಜಿ ಪರಮೇಶ್ವರ್ ಅವರನ್ನು ರಾಜಕೀಯವಾಗಿ ಮುಗಿಸಿದರು ಅಖಂಡ ಶ್ರೀನಿವಾಸನ ಮನೆಗೆ ಬೆಂಕಿ ಹಚ್ಚಿ ದಾಳಿಕೋರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಪಿ ಎಫ್ ಐ ಹಾಗೂ ಎಸ್ ಡಿ ಪಿ ಐ ಸಮಾಜಘಾತಕ ಶಕ್ತಿಗಳನ್ನು ಬೆಳಸಿಕೊಂಡು ಬಂದರು. ಸಮಾಜವನ್ನು ಸಮುದಾಯಗಳನ್ನು ಒಡೆಯುವ ಪ್ರಯತ್ನ ಮಾಡಿದರು. ಅವರ ಕಾಲದಲ್ಲಿ ನಡೆದಿದ್ದ ಭ್ರಷ್ಟಾಚಾರ ಹಗರಣಗಳನ್ನು ಮುಚ್ಚಿ ಹಾಕಿಕೊಳ್ಳಲು ಲೋಕಾಯುಕ್ತ ಸಂಸ್ಥೆಯನ್ನೇ ಮುಚ್ಚಿ ಎಸಿಬಿಯನ್ನು ರಚಿಸಿದರು. ಇದನ್ನು ನೋಡಿದರೆ ಕಾಂಗ್ರೆಸ್ ಸರ್ಕಾರವೇ ಭ್ರಷ್ಟ ಅತಿ ಭ್ರಷ್ಟಾಡಳಿತ ಸರ್ಕಾರ ಎಂಬುದು ಸಾಬೀತಾಗಿದೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಗಿರೀಶ್ ಉಪಾಧ್ಯಾಯ, ಜಿಲ್ಲಾ ವಕ್ತಾರ ಡಾ.ಕೆ.ವಸಂತ್‌ಕುಮಾರ್, ನಗರ ವಕ್ತಾರ ಎಂ.ಎ.ಮೋಹನ್, ಮೈಸೂರು ವಿಭಾಗ ಮಾಧ್ಯಮ ಕೇಂದ್ರ ಸಂಯೋಜಕ ನಾಗೇಶ್, ಜಿಲ್ಲಾ ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್, ಸಹ ವಕ್ತಾರರ ಕೇಬಲ್‌ ಮತ್ತಿತರರು ಉಪಸ್ಥಿತರಿದ್ದರು.


Share