ಸಿದ್ದು ವಿರುದ್ಧ ಹಳ್ಳಿಹಕ್ಕಿ ಕಿಡಿ

559
Share

ಜೆಡಿಎಸ್ ಪ್ರಾಥಮಿಕ ಸದಸ್ಯತ್ವದಿಂದ‌ ಕಿತ್ತು ಹಾಕಿದ್ದ ಸಿದ್ದರಾಮಯ್ಯರನ್ನು ಕಾಂಗ್ರೆಸ್ ಗೆ ಕರೆ ತಂದಿದ್ದೇ ನಾನು.
ಹಿಂದುಳಿದ‌ ವರ್ಗಗಳ ನಾಯಕ ಸಿದ್ದರಾಮಯ್ಯರನ್ನು ಈ ರಾಜ್ಯದ ಮುಖ್ಯಮಂತ್ರಿ ಮಾಡಿದ್ದಕ್ಕೆ ಪಶ್ಚಾತ್ತಾಪ ಆಗಿಲ್ಲ, ಸಂತೋಷವಾಗಿದೆ.
ಆದರೆ ಸಿದ್ದರಾಮಯ್ಯ ಎಲ್ಲರನ್ನೂ ತುಳಿಯುವ ಕೆಲಸ ಮಾಡಿದರು.
ಎಲ್ಲರನ್ನೂ ತುಳಿಯುವುದೇ ಸಿದ್ದರಾಮಯ್ಯ ಕೆಲಸವಾಗಿದೆ.
ಮೈಸೂರಿನಲ್ಲಿ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಎಚ್. ವಿಶ್ವನಾಥ್.

ಪ್ರಧಾನಿ ಮೋದಿ ವಿರುದ್ಧ ಆಪಾದನೆ ಮಾಡುತ್ತಿರುವ ಪ್ರತಿಪಕ್ಷಗಳ‌ ನಾಯಕರು ದಾಖಲೆಗಳಿದ್ದರೇ ಬಿಡುಗಡೆ ಮಾಡಿ.
ಕೇವಲ ಹಿಟ್ ಅಂಡ್ ರನ್ ನಂತೆ ಆರೋಪ ಮಾಡಬೇಡಿ.
ಕಾಂಗ್ರೆಸ್ ನಾಯಕರೇ ಅಪ್ರಬುದ್ದರಂತೆ ಮಾತನಾಡಬೇಡಿ.
ಮಾಜಿ ಸಚಿವ ಎಚ್. ವಿಶ್ವನಾಥ್ ಮೈಸೂರಿನಲ್ಲಿ ಹೇಳಿಕೆ.

ಪ್ರಧಾನಿ ನರೇಂದ್ರ ಮೋದಿಯವರ ಲಡಾಕ್ ಭೇಟಿಯನ್ನು ಟೀಕಿಸಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ‌ ವಿರುದ್ಧ ಮಾಜಿ ಸಚಿವ ಎಚ್. ವಿಶ್ವನಾಥ್ ಮೈಸೂರಿನಲ್ಲಿ ವಾಗ್ದಾಳಿ.
ಮೋದಿ ಲಡಾಕ್‌ ಭೇಟಿಯನ್ನು ಟೀಕಿಸಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಟೀಕಾಪ್ರಹಾದ ನಡೆಸಿದ ಎಚ್. ವಿಶ್ವನಾಥ್.
ಮೋದಿ ಈ ದೇಶದ ಮೊದಲ ಅಹಿಂದ ಪ್ರಧಾ‌ನಿ.
ಅಹಿಂದ ಎನ್ನುವ ಸಿದ್ದರಾಮಯ್ಯ ಇದನ್ನು ನೆನಪಿನಲ್ಲಿಟ್ಟುಕೊಳ್ಳಲಿ.
ಮೋದಿಗೂ ದೇವರಾಜ ಅರಸುರವರಿಗೂ ಸಾಕಷ್ಟು ಸಾಮ್ಯತೆಯಿದೆ.
ಮೋದಿಯವರಲ್ಲಿ ನಾನು ದೇವರಾಜ ಅರಸು ಅವರನ್ನು ಕಾಣುತ್ತಿದ್ದೇ‌ನೆ.
ಮೋದಿಯವರನ್ನು ಟೀಕಿಸುವ ಮುನ್ನ ಯೋಚಿಸಿ ಮಾತನಾಡಿ.
ಮೋದಿ ಈ ದೇಶ ಕಂಡ ಯಶಸ್ವಿ ನಾಯಕ.
ದೇಶದ ಸಮಗ್ರತೆ ಐಕ್ಯತೆ ಬಗ್ಗೆ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು.
ಮಾಜಿ ಸಚಿವ ಎಚ್.‌ ವಿಶ್ವನಾಥ್ ಮೈಸೂರಿನಲ್ಲಿ ಹೇಳಿಕೆ.

ರಾಜ್ಯದಲ್ಲಿ ಎರಡು ಪ್ರತಿರೋಧದ ಪಕ್ಷಗಳು ಸೇರಿಕೊಂಡು ಸರ್ಕಾರ ರಚಿಸಿದ್ದೇ ಬ್ಲಂಡರ್.
ಕಾಂಗ್ರೆಸ್ ಜೆಡಿಎಸ್ ಸರ್ಕಾರ ರಚನೆ ಮಾಡಿದ ಕ್ರಮವನ್ನು ಬ್ಲಂಡರ್ ಎಂದು ಟೀಕಿಸಿದ ಎಚ್. ವಿಶ್ವನಾಥ್.
ನನಗೆ ಎಂ‌.ಎಲ್‌.ಸಿ ಸ್ಥಾನ ಸಿಗದಿದ್ದರೆ ಆಕಾಶಕ್ಕೂ ಹೋಗುವುದಿಲ್ಲ, ಪಾತಾಳಕ್ಕೂ ಹೋಗುವುದಿಲ್ಲ, ವಿಶ್ವನಾಥ್ ವಿಶ್ವನಾಥನೇ.
ನನಗೆ ಎಂ‌.ಎಲ್‌‌.ಸಿ ಸ್ಥಾ‌ನ‌ ನೀಡಲು ಯಾವುದೇ ರೀತಿಯ ಕಾನೂನು ತೊಡಕಿಲ್ಲವೆಂದು ಪ್ರತಿಪಾದಿಸಿದ ಎಚ್. ವಿಶ್ವನಾಥ್.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಿಂದ ಪ್ರಧಾನಿ ನರೇಂದ್ರ ಮೋದಿ ಟೀಕೆ ವಿಚಾರ.
ಎಳಸು ಮುಂಡೇದೇ ಸರಿಯಾಗಿ ಮಾತನಾಡು ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಪತ್ರ ಬರೆದು ರಾಹುಲ್ ಗಾಂಧಿಗೆ ಬುದ್ದಿ ಹೇಳಿದ್ದಾರೆ.
ದೇಶದ ಸಮಗ್ರತೆಯ ವಿಚಾರ ಬಂದಾಗ ಸರಿಯಾಗಿ ಮಾತ‌‌ನಾಡಬೇಕು.
ನೀವು ನಿಮ್ಮ ಪಕ್ಷದ ಪ್ರಧಾನಿಗಳಿಗೆ ಸರಿಯಾದ ಗೌರವ ಕೊಟ್ಟಿಲ್ಲ.
ಮನಮೋಹನ್ ಸಿಂಗ್, ನರಸಿಂಹರಾವ್ ಅವರನ್ನು ನೀವು ಹೇಗೆ ನಡೆಸಿಕೊಂಡಿರಿ ಎಂಬುದು ಎಲ್ಲರಿಗೂ ಗೊತ್ತಿದೆ.
ಮಾಜಿ ಸಚಿವ ಎಚ್. ವಿಶ್ವನಾಥ್ ಮೈಸೂರಿನಲ್ಲಿ ಹೇಳಿಕೆ.


Share