ಸೂಡಾನ್ ದೇಶದಲ್ಲಿ ಸಿಲುಕಿಕೊಂಡ ಹುಣಸೂರು,ಎಚ್ ಡಿ ಕೋಟೆ ಭಾಗದ 108 ಮಂದಿ

Share

 

ಮೈಸೂರು-ಪ್ರಸ್ತುತ ಸುಡಾನ್ ದೇಶದಲ್ಲಿ ಸೇನೆ ಹಾಗೂ ಅರೆ ಸೇನಾಪಡೆಗಳ ನಡುವೆ ಸಂಘರ್ಷ ಸಂಭವಿಸಿದ್ದು, ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಪಕ್ಷಿರಾಜಪುರ ಮತ್ತು ಶಂಕರಪುರ ಹಾಗೂ ಹೆಚ್.ಡಿ ಕೋಟೆ ತಾಲ್ಲೂಕಿನ ಟೈಗರ್ ಬ್ಲಾಕ್ ಹಾಡಿಯ ಹಕ್ಕಿ-ಪಿಕ್ಕಿ ಜನಾಂಗದ ಒಟ್ಟು 108 ಜನರು ಸಿಲುಕಿಕೊಂಡಿರುವ ಮಾಹಿತಿಯಿದೆ, ಸದರಿಯವರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲು ಕ್ರಮವಹಿಸಲಾಗುತ್ತಿದೆ.
ಮೈಸೂರು ಜಿಲ್ಲೆಯವರು ಸುಡಾನ್ ದೇಶದಲ್ಲಿ ಸಿಲುಕಿಕೊಂಡಿದ್ದರೆ, ಅಂತಹವರುಗಳ ಮಾಹಿತಿಯನ್ನು (ಪಾಸ್ ಪೋರ್ಟ್, ಮೊಬೈಲ್ ಸಂಖ್ಯೆ ಹಾಗೂ ಇತರೆ) ಸಂಬಂಧಿಸಿದವರು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 0821-2423800, 1077 ಗೆ ಕರೆ ಮಾಡಿ ಮಾಹಿತಿ ನೀಡಲು ಕೋರಿದೆ. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ನೀಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ

Share