ಹದಗೆಟ್ಟ ದೆಹಲಿ ವಾಯು ಮಾಲಿನ್ಯ : ಕೇಜ್ರಿವಾಲ್ ರಿಂದ ಉನ್ನತ ಮಟ್ಟದ ಸಭೆ

ನವ ದೆಹಲಿ:
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಮಧ್ಯಾಹ್ನ 12:00 ಗಂಟೆಗೆ ನಗರದ ಹದಗೆಡುತ್ತಿರುವ ವಾಯು ಮಾಲಿನ್ಯದ ಬಿಕ್ಕಟ್ಟಿನ ಕುರಿತು ಚರ್ಚಿಸಲು ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಸಭೆಯಲ್ಲಿ ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ಮತ್ತು ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ಬೆಳಗ್ಗೆ ದೆಹಲಿಯ ಗಾಳಿಯು ಸತತ ಐದನೇ ದಿನವೂ ತೀವ್ರವಾಗಿ ಕಲುಷಿತಗೊಂಡಿದ್ದು, ವಾಯು ಗುಣಮಟ್ಟ ಸೂಚ್ಯಂಕ (AQI) ಇನ್ನೂ ‘ತೀವ್ರ’ ವಾಗಿ ಹದಗೆಟ್ಟಿದೆ. ರಾಷ್ಟ್ರ ರಾಜಧಾನಿಯಲ್ಲಿ ಒಟ್ಟಾರೆ AQI 488 ನಲ್ಲಿ ದಾಖಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಅತ್ಯಂತ ಹೆಚ್ಚು ಬಾಧಿತ ಪ್ರದೇಶಗಳೆಂದರೆ RK ಪುರಂ (466), ITO (402), ಪತ್ಪರ್ಗಂಜ್ (471), ಮತ್ತು ನ್ಯೂ ಮೋತಿ ಬಾಗ್ (488).
ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ದೆಹಲಿ ಸರ್ಕಾರವು 5 ನೇ ತರಗತಿಯವರೆಗಿನ ಎಲ್ಲಾ ಶಾಲೆಗಳನ್ನು ನವೆಂಬರ್ 10 ರವರೆಗೆ ರಜೆಯನ್ನು ವಿಸ್ತರಿಸಿದೆ. 6-12 ನೇ ತರಗತಿಯವರೆಗಿನ ಶಾಲೆಗಳನ್ನು ಮುಚ್ಚುವ ಅಗತ್ಯವಿಲ್ಲ, ಅವರು ಬಯಸಿದಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸಬಹುದು ಎಂದು ಹೇಳಿದ್ದಾರೆ.