ಹಾಸನದಲ್ಲಿ 4 ಹೊಸ ಕೋವಿಡ್ ಪ್ರಕರಣ ಪತ್ತೆ
ಹಾಸನ,ಜೂ.18(ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಇಂದು ಹೊಸದಾಗಿ 4 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 253 ಕ್ಕೆ ಏರಿಕೆಯಾಗಿದೆ. ಈ ವರಗೆ 192 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 60 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಒಬ್ಬರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇಂದು ಪತ್ತೆಯಾದ ನಾಲ್ಕು ಪ್ರಕರಣಗಳಲ್ಲಿಯೂ ಮುಂಬೈ ಪ್ರಯಾಣದ ಹಿನ್ನಲೆ ಇದೆ. ಒಬ್ಬರು ಅರಸೀಕೆರೆ ಹಾಗೂ ಮೂವರು ಹಾಸನ ತಾಲ್ಲೂಕಿಗೆ ಸೇರಿದವರಾಗಿದ್ದಾರೆ.
**