ಹಾಸನ; ಸ್ವಾತಂತ್ರ್ಯ ದಿನಾಚರಣೆಗೆ ಅಧಿಕಾರಿ ಸಿಬ್ಬಂದಿಗಳ ಹಾಜರಾತಿ ಕಡ್ಡಾಯ: ಕವಿತ ರಾಜರಾಂ

Share

ಸ್ವಾತಂತ್ರ್ಯ ದಿನಾಚರಣೆಗೆ ಅಧಿಕಾರಿ ಸಿಬ್ಬಂದಿಗಳ ಹಾಜರಾತಿ ಕಡ್ಡಾಯ: ಕವಿತ ರಾಜರಾಂ
ಹಾಸನ,ಆ.13(ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆ.15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ ಅವರು ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಸ್ವಾತಂತ್ರ್ಯ ದಿನಾಚರಣೆಯ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಕಾರ್ಯಕ್ರಮವನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ, ಶಿಷ್ಠಾಚಾರದಲ್ಲಿ ಲೋಪವಾಗದಂತೆ ಆಯೋಜಿಸಬೇಕಿದ್ದು, ಎಲ್ಲಾ ಇಲಾಖೆಗಳ ಇದರಲ್ಲಿ ತೊಡಗಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು.
ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕುಡಿಯುವ ನೀರು ಮತ್ತು ಇತರ ಪೂರಕ ವ್ಯವಸ್ಥೆ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ಕವಿತ ರಾಜರಾಂ ಅವರು ತಿಳಿಸಿದರು.
ಎಲ್ಲಾ ಇಲಾಖಾ ಅಧಿಕಾರಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮವಹಿಸಿ ಎಂದರಲ್ಲದೆ, ಕಾರ್ಯಕ್ರಮ ನಡೆಯುವ ಸ್ಥಳವನ್ನು ಸ್ಯಾನಿಟೈಸೇಷನ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರ ಧ್ವಜ ಆರೋಹಣಕ್ಕೆ ಪಥ ಸಂಚಲನ ಹಾಗೂ ಒಂದೇ ಮಾತರಂ ಮತ್ತು ನಾಡಗೀತೆ ಹಾಡಲು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.Share