ಹಿರಿಯ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

258
Share

ಬಿಜೆಪಿಯ ಹಿರಿಯ ಸಂಸದ ಶ್ರೀನಿವಾಸ್ ಪ್ರಸಾದ್ ರವರು ಮದ್ಯರಾತ್ರಿ 1 20 ಕ್ಕೆ ನಿಧನ ಹೊಂದಿದರೆಂದು ತಿಳಿಸಲು ವಿಷಾದಿಸುತ್ತೇವೆ. 76 ವರ್ಷದ ಶ್ರೀನಿವಾಸ್ ಪ್ರಸಾದ್ ರವರು ಸ್ವಲ್ಪ ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ನಿನ್ನೆ ಮದ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೃತ ದೇಹವನ್ನು ಮೈಸೂರಿನ ಅವರ ಜಯಲಕ್ಷ್ಮಿ ಪುರದ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಶ್ರೀನಿವಾಸ್ ಪ್ರಸಾದ್ ರವರು ಮೈಸೂರು ಪತ್ರಿಕೆಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದು ಮೈಸೂರು ಪತ್ರಿಕೆ ಬಗ್ಗೆ ಅಪಾರ ಗೌರವ ಹೊಂದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮೈಸೂರು ಪತ್ರಿಕೆ ತಂಡವು ದೇವರಲ್ಲಿ ಪ್ರಾರ್ಥಿಸುತ್ತದೆ. ಅವರ ಕುಟುಂಬ ವರ್ಗದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತದೆ.


Share