ಅಖಿಲ ಭಾರತ ಜನಾಧಿಕಾರ ಸುರಕ್ಷಾ ಸಮಿತಿಯಿಂದ(AIJASC) ಸ್ವಾಗತ

22
Share

 

 

ಮೈಸೂರು,ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ದಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯನ್ನು ವಾರ್ಷಿಕ ಆರು ತಿಂಗಳಿನಿಂದ 12 ತಿಂಗಳಿಗೆ ವಿಸ್ತರಿಸಿ, ಇದಕ್ಕಾಗಿ ವಾರ್ಷಿಕವಾಗಿ 50 ಕೋಟಿ ರೂ.ಗಳನ್ನು ಒದಗಿಸಲಾಗುವುದೆಂದು ಇಂದಿನ ರಾಜ್ಯ ಬಜೆಟ್ ನಲ್ಲಿ ಘೋಷಣೆ ಮಾಡಿರುವುದನ್ನು ಅಖಿಲ ಭಾರತ ಜನಾಧಿಕಾರ ಸುರಕ್ಷಾ ಸಮಿತಿಯಿಂದ(AIJASC) ಸ್ವಾಗತಿಸುತ್ತೇವೆ.ರಾಜ್ಯದ ಬಹುತೇಕ ಆದಿವಾಸಿ ಜನರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ತೀವ್ರ ಬಡತನದಲ್ಲಿ ಉಳುಮೆಗೆ ಭೂಮಿಯೂ ಇಲ್ಲದೆ, ಕೆಲವೊಮ್ಮೆ ಕೂಲಿಯೂ ಸಿಗದೇ ಬಹಳ ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವ ಆದಿವಾಸಿ ಜನರಿಗೆ ಅಪೌಷ್ಟಿಕತೆಯನ್ನು ಹೋಗಲಾಡಿಸುವುದಕ್ಕಾಗಿ ನೀಡುತ್ತಿದ್ದ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ವರ್ಷವಿಡೀ ವಿತರಿಸುವಂತೆ ಆಗ್ರಹಿಸಿ ಕಳೆದ ನಾಲ್ಕೈದು ವರ್ಷಗಳಿಂದ ನಾವು ನಿರಂತರವಾಗಿ ಹೋರಾಟವನ್ನು ಮಾಡಿ ಆಗ್ರಹಿಸಿದ್ದೇವೆ. ಇಂದು ಅವರ ಹಕ್ಕೊತ್ತಾಯಗಳನ್ನು ಮನ್ನಿಸಿರುವ ಮಾನ್ಯ ಮುಖ್ಯಮಂತ್ರಿಗಳು, ಹಣಕಾಸು ಸಚಿವರಾದ ಶ್ರೀ ಸಿದ್ದರಾಮಯ್ಯನವರ ಕ್ರಮವನ್ನು ಸ್ವಾಗತಿಸುತ್ತೇವೆ. ಇದರ ಜೊತೆಗೆ ಇವರಿಗೆ ಶಿಕ್ಷಣ ,ಆರೋಗ್ಯ ಉದ್ಯೋಗ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಕ್ತ ನೀತಿಗಳನ್ನು ರೂಪಿಸಬೇಕೆಂದು ಈ ಸಂದರ್ಭದಲ್ಲಿ ಅಖಿಲ ಭಾರತ ಜನಾಧಿಕಾರ ಸುರಕ್ಷಾ ಸಮಿತಿಯಿಂದ(AIJASC) ಒತ್ತಾಯಿಸುತ್ತೇವೆ. ಎಂದು AIJASC ಪ್ರಕಟಣೆಯಲ್ಲಿ ತಿಳಿಸಲಾಗಿದೆ

 


Share