ಅಣಬೆ ಪೌಷ್ಠಿಕ ಆಹಾರ

302
Share

ಚಿಕ್ಕಮಗಳೂರು ಜಿಲ್ಲೆ
=================
ಅಣಬೆ ಪೌಷ್ಠಿಕ ಆಹಾರ
ಚಿಕ್ಕಮಗಳೂರು.::-ಅಣಬೆಯು ಉತ್ತಮ ಪೌಷ್ಟಿಕ ಅಂಶಗಳನ್ನು ಹೊಂದಿದ್ದು, ಉತ್ತಮ ಗುಣಮಟ್ಟದ ಆಹಾರವಾಗಿದೆ. ಇದನ್ನು ಎಲ್ಲರೂ ಬಳಸುವ ಮೂಲಕ ಆರೋಗ್ಯವನ್ನು ಕಾಪಡಿಕೊಳ್ಳಬೇಕು ಎಂದು ಜಿಲ್ಲಾ ಉಪ ಪೊಲೀಸ್ ಅಧೀಕ್ಷಕಿ ಶೃತಿ ಅವರು ತಿಳಿಸಿದರು.
ಅವರು ಇಂದು ನಗರಸಭೆ ಸಭಾಂಗಣದಲ್ಲಿ ಐಸಿಐಸಿಐ ಫೌಂಡೇಶನ್ ಹಾಗೂ ನಗರಸಭೆ ಸಹಯೋಗದೊಂದಿಗೆ ಬೀದಿ ಬದಿ ವ್ಯಾಪಾರಿಗಳಿಗೆ ಉಚಿತ ಅಣಬೆ ಆಹಾರ ಉತ್ಪನ್ನಗಳ ತಯಾರಿಕೆ ಹಾಗೂ ಆರ್ಥಿಕ ಸಾಕ್ಷರತೆ (ಡಿಜಿಟಲ್ ಪೇಮೆಂಟ್) ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಬೀದಿ ಬದಿ ವ್ಯಾಪಾರಿಗಳು ಅಣಬೆಯನ್ನು ಬಳಸಿಕೊಳ್ಳುವ ಮೂಲಕ ಆಹಾರವನ್ನು ಉತ್ಪಾದನೆ ಮಾಡಬೇಕು ಜೊತೆಗೆ ಸ್ವಚ್ಚತೆಯನ್ನು ಕಾಪಡಬೇಕು ಎಂದ ಅವರು ಡಿಜಿಟಲ್ ಪೇಮೆಂಟ್ ಬಳಸುವ ಮೂಲಕ ವ್ಯಾಪಾರಿಗಳು ಹಣವನ್ನು ಉಳಿತಾಯ ಮಾಡಬೇಕು ಎಂದರು.
ಐಸಿಐಸಿಐ ಫೌಂಢೇಶನ್ ಸಂಸ್ಥೆಯ ವತಿಯಿಂದ ಬೀದಿ ಬದಿ ವ್ಯಾಪಾರಸ್ಥರಿಗೆ ೧೦.೦೦೦ರೂಗಳ ಸಾಲ ಸೌಲಭ್ಯವನ್ನು ನೀಡುತ್ತಿದ್ದು ಎಲ್ಲರೂ ಇದರ ಸದುಪಯೋಗಪಡಿಸಿಕೊಳ್ಳುವುದರ ಮೂಲಕ ವ್ಯಾಪಾರದಲ್ಲಿ ಅಭಿವೃದ್ಧಿ ಹೊಂದಬೇಕು, ಸಾಲವನ್ನು ನಿಗಧಿಪಡಿಸಿದ ದಿನದೊಳಗೆ ಮರುಪಾವತಿಸಬೇಕು ಎಂದು ತಿಳಿಸಿದರು.
ನಗರಸಭೆ ಪೌರಾಯುಕ್ತ ಬಸವರಾಜ್ ಮಾತನಾಡಿ, ಅಣಬೆಯು ನಿರಂತರವಾಗಿ ಸಿಗುತ್ತಿರುವುದರಿಂದ ಬೀದಿ ಬದಿ ವ್ಯಾಪಾರಿಗಳು ಅಣಬೆಯಿಂದ ತಯಾರಿಸಲ್ಪಡುವ ಆಹಾರಗಳಿಗೆ ಹೆಚ್ಚು ಒತ್ತು ನೀಡಬೇಕು ಹಾಗೇ ತಯಾರಿಕಾ ಸ್ಥಳಗಳಲ್ಲಿ ಸ್ವಚ್ಚತೆಯನ್ನು ಕಾಪಾಡಬೇಕು ಎಂದರು.
ನಗರದಲ್ಲಿ ಫುಡ್‌ಕೋರ್ಟ್ ಸ್ಥಾಪನೆಗೆ ಯೋಜನೆ ಹಾಕಿಕೊಂಡಿದ್ದೇವೆ ಶೀಘ್ರದಲ್ಲೆ ಸ್ಥಾಪನೆಯಾಗಲಿದೆ ಎಂದು ತಿಳಿಸಿದರು. ಚಿಕ್ಕಮಗಳೂರು ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ ಈ ಸಮೀಕ್ಷೆ ಇಡೀ ರಾಜ್ಯಕ್ಕೆ ಮಾದರಿಯಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಆನಂದ, ಐಸಿಐಸಿಐ ಫೌಂಡೇಷನ್ ವಲಯ ಅಭಿವೃದ್ಧಿ ಅಧಿಕಾರಿ ಜಿ.ನರಸಿಂಹಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು.


Share