ಅಭಿವೃದ್ಧಿ ಕಾರ್ಯ ಶೀಘ್ರವೇ ಮುಗಿಸಿ

380
Share

ಜಿಲ್ಲಾದ್ಯಾಂತ ನಿರಂತರವಾಗಿ ವಿದ್ಯುತ್ ಪೂರೈಸಿ: ಸಂಸದ ಪ್ರತಾಪ ಸಿಂಹ
ಮೈಸೂರು, ಜೂನ್,26(ಕರ್ನಾಟಕ ವಾರ್ತೆ):- ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿಯ 2020-21 ನೇ ಸಾಲಿನ ಮೊದಲ ತ್ರೈಮಾಸಿಕ ಸಭೆಯನ್ನು ಸಂಸದ ಪ್ರತಾಪ ಸಿಂಹ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ ಸಿಂಹ ಅವರು ಮಾತನಾಡಿ, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿರುವ ಹಿನ್ನಲೆಯಲ್ಲಿ ನಿರಂತರ ಜ್ಯೋತಿ ಯೋಜನೆಯಡಿ ಮೈಸೂರು ಜಿಲ್ಲಾದ್ಯಾಂತ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಿ. ಅಲ್ಲದೆ, ರೈತರಿಗೂ ನಿಗಧಿತ ವೇಳೆಗೆ ವಿದ್ಯುತ್ ಪೂರೈಸುವುದರ ಜೊತೆಗೆ, ವಿದ್ಯುತ್ ಸಂಬಂಧ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾದ್ಯಾಂತ ಎಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕವಿದೆ ಎಂಬುದನ್ನು ಸಮೀಕ್ಷೆ ನಡೆಸಿ. ಜಿಲ್ಲಾ ವ್ಯಾಪ್ತಿಗೆ ಒಳಪಡುವ ಹಾಡಿಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದ ಮನೆಗಳನ್ನು ಗುರುತಿಸಿ ಶೀಘ್ರದಲ್ಲಿ ಅವರಿಗೆ ಸೌಭಾಗ್ಯ ವಿದ್ಯುತ್ ಯೋಜನೆ ಅಡಿ ಸಂಪರ್ಕ ಕಲ್ಪಿಸಿಕೊಡುವ ವ್ಯವಸ್ಥೆ ಮಾಡಿ ಎಂದು ಸಂಬಂಧಿಸಿದ ಅಧಿಕಾರಿಗೆ ತಿಳಿಸಿದರು.
ಮೈಸೂರು ಹೊರವಲಯದ ರಿಂಗ್ ರಸ್ತೆಯ ಬದಿಯಲ್ಲಿ ಹೂವು, ಹಣ್ಣು ಬಿಡುವ ಗಿಡಗಳನ್ನು ನೆಡಿ. ಅಲ್ಲದೆ, ನಿರಂತರವಾಗಿ ಸಸಿಗಳನ್ನು ಪೋಷಿಸಿ. ಕೃಷಿ ಅರಣ್ಯ ಪೆÇ್ರೀತ್ಸಾಹ ಯೋಜನೆಯ ಬಗ್ಗೆ ರೈತರಿಗೆ ಮಾಹಿತಿ ನೀಡಿ ಎಂದು ಅರಣ್ಯ ಉಪಸಂರಕ್ಷಣಾಧಿಕಾರಿಗೆ ಹೇಳಿದರು.
ತಾಲ್ಲೂಕು ಪಂಚಾಯತಿ ಆಡಳಿತಾಧಿಕಾರಿಗಳು ಸಾಮಾಜಿಕ ಅರಣ್ಯ ಯೋಜನೆ ಅಡಿ ಕೈಗೊಂಡಿರುವ ಗಿಡ ನೆಡುವ ಕಾರ್ಯಕ್ರಮಕ್ಕೆ ಸಂಬಂಧಿಸಿದ ಅಧಿಕಾರಿಗಳೊಂದಿಗ ಸಮನ್ವ ಸಾಧಿಸಿ, ಸರ್ಕಾರಿ ಜಾಗ, ಸ್ಮಾಶಾನಗಳು ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಗಿಡ ನೆಡಿಸಲು ಕಾರ್ಯಪ್ರವೃತ್ತರಾಗಿ ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಸ್ಲಂ ಬೋರ್ಡ್‍ಗಳಲ್ಲಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ತ್ವರಿತಗತಿಯಲ್ಲಿ ಕೆಲಸ ಪೂರ್ಣಗೊಳಿಸುವ ಮೂಲಕ ಫಲಾನುಭವಿಗಳಿಗೆ ನೆರವಾಗಿ ಎಂದು ಹೇಳಿದರು.
ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಮಾತನಾಡಿ, ಕೊರೊನಾ ಸೋಂಕು ಸಂಬಂಧ ಜಿಲ್ಲೆಯಲ್ಲಿ ಇಲ್ಲಿಯವರೆಗೆ 19,500 ಮಾದರಿ ಪರೀಕ್ಷೆ ನಡೆಸಲಾಗಿದೆ. ಇತ್ತೀಚಿಗೆ ಹೊರರಾಜ್ಯದಿಂದ ಬರುತ್ತಿರುವವರ ಸಂಖ್ಯೆ ಹೆಚ್ಚಿದ್ದು, ಪರೀಕ್ಷೆಯನ್ನು ಹೆಚ್ಚಾಗಿ ಮಾಡುತ್ತಿರುವ ಹಿನ್ನಲೆ ಲ್ಯಾಬ್‍ನಲ್ಲಿ ಕೆಲವು ಮಾದರಿ ಪರೀಕ್ಷೆಗಳ ಫಲಿತಾಂಶ ಬರುವುದು ತಡವಾಗುತ್ತಿದೆ. ಆದ್ದರಿಂದ ಚಾಮರಾಜನಗರ ಜಿಲ್ಲೆಯ ಲ್ಯಾಬ್‍ಗೆ ಮಾದರಿ ಪರೀಕ್ಷೆಗೆ ಕಳುಹಿಸಲು ಚಿಂತಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಶಾಸಕರಾದ ಬಿ.ಹರ್ಷವರ್ಧನ್, ಹೆಚ್.ಪಿ.ಮಂಜುನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಮ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಅರಣ್ಯ ಉಪ ಸಂರಕ್ಷಣಾಧಿಕಾರಿ ಪ್ರಶಾಂತ್‍ಕುಮಾರ್ ಸೇರಿದಂತೆ ತಾಲ್ಲೂಕು ಪಂಚಾಯತ್ ಅಧ್ಯಕ್ಷರು, ಆಡಳಿತಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಕರಪತ್ರ ಬಿಡುಗಡೆ
ಮೈಸೂರು. ಜೂನ್.26(ಕರ್ನಾಟಕ ವಾರ್ತೆ):- ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯ ಸಂಕ್ಷಿಪ್ತ ಮಾಹಿತಿವುಳ್ಳ ಕರಪತ್ರವನ್ನು ಶುಕ್ರವಾರ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಂಸದ ಪ್ರತಾಪ ಸಿಂಹ ಅವರು ಬಿಡುಗಡೆಗೊಳಿಸಿದರು. ಶಾಸಕ ಹೆಚ್.ಪಿ.ಮಂಜುನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಮ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಜಂಟಿ ಕೃಷಿ ನಿರ್ದೇಶಕ ಡಾ.ಎಂ.ಮಹಂತೇಶಪ್ಪ ಇತರರು ಉಪಸ್ಥಿತರಿದ್ದರು.


Share