ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಕಗ್ಗಂಟಿಲ್ಲ – ಸಿಎಂ

63
Share

 

*ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯವರನ್ನು ಜನರೇಕೆ ನಂಬುತ್ತಾರೆ?*

*ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ*

*ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ*

ಮೈಸೂರು, ಮಾರ್ಚ್ 24:

ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಕಗ್ಗಂಟಿಲ್ಲ*

ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಸುಳ್ಳು ಹೇಳುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಮೈಸೂರು , ಚಾಮರಾಜನಗರ ಕ್ಷೇತ್ರವನ್ನೂ ಸೇರಿಸಿದಂತೆ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದೆ ಎಂದರು

ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದ್ದು, ಈ ಬಾರಿ ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು..

ಅವರು ಇಂದು ಮೈಸೂರಿನ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

 

*ನಾವು ಬಿಜೆಪಿಯಂತೆ ಸುಳ್ಳು ಹೇಳುವುದಿಲ್ಲ*

ಗ್ಯಾರಂಟಿಯೋಜನೆಗಳು ಕಾಂಗ್ರೆಸ್ ಪಕ್ಷದ ನೆರವಿಗೆ ಬರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ನಮ್ಮ ಸರ್ಕಾರ ನುಡಿದಂತೆ ನಡೆದಿದ್ದು, ಜನರಿಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ. ಗ್ಯಾರಂಟಿಗಳಿಗೆ ಈ ವರ್ಷ 36000 ಕೋಟಿ ಹಾಗೂ ಮುಂದಿನ ವರ್ಷ 52009 ಕೋಟಿ ರೂ.ಗಳನ್ನು ವೆಚ್ಚ ಮಾಡಲಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳದೇ , ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು.

*ರಾಜ್ಯದ ಜನ ಕಾಂಗ್ರೆಸ್ ಪಕ್ಷದ ಕೈ ಹಿಡಿಯಲಿದ್ದಾರೆ*

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮಾಡಿರುವ ಸಾಧನೆಗಳ ಆಧಾರದ ಮೇಲೆ ಚುನಾವಣೆಯನ್ನು ಎದುರಿಸಲಿದ್ದು, ಜನತೆ ವಿಧಾನಸಭಾ ಚುನಾವಣೆಯಂತೆ ನಮ್ಮ ಪಕ್ಷದ ಕೈ ಹಿಡಿಯಲಿದ್ದಾರೆ. ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದೆ ಎಂದರುಜ

ನರ ಅಭಿಪ್ರಾಯಕ್ಕೆ ಮನ್ನಣೆ*

ಕುಟುಂಬ ರಾಜಕಾರಣವನ್ನು ವಿರೋಧಿಸುವ ಮುಖ್ಯಮಂತ್ರಿಗಳೇ ತಮ್ಮ ಸಚಿವರ ಕುಟುಂಬದವರಿಗೆ ಈ ಬಾರಿ ಟಿಕೆಟ್ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ, ಇದು ಕುಟುಂಬ ರಾಜಕಾರಣವಲ್ಲ. ಜನರು ಯಾವ ಅಭ್ಯರ್ಥಿಗೆ ಬೆಂಬಲ ಸೂಚಿಸಬಹುದೆಂಬ ಚಿಂತನೆಯ ಮೇಲೆ ಅವರನ್ನು ಆಯ್ಕೆ ಮಾಡಲಾಗಿದ್ದು, ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗಿದೆ ಎಂದರು.


Share