ಅರಮನೆ ಯುಗಾದಿ ಸಂಗೀತೋತ್ಸವ-2021 ರದ್ದು

363
Share

ಕರೋನಾ ಸೋಂಕು ತಡೆಗಟ್ಟುವ ಮುನ್ನೆಚ್ಚರಿಕೆ ಕಾರಣದಿಂದ ಮೈಸೂರು ಅರಮನೆ ಯುಗಾದಿ ಸಂಗೀತೋತ್ಸವ-2021 ವಿದ್ಯುತ್ ದೀಪಾಲಂಕಾರ ಹಾಗೂ ಧ್ವನಿ ಮತ್ತು ಬೆಳಕು ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಅರಮನೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರತಿ ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳಲ್ಲಿ ಅರಮನೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ರದ್ದುಪಡಿಸಲಾಗಿದೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ಪ್ರವೇಶ ನಿರ್ಬಂಧಿಸಲಾಗಿದೆ.
ಏಪ್ರಿಲ್ 10 ರಿಂದ 30ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ


Share