ಅ.9 ಕ್ಕೆ ಚಲನಚಿತ್ರೋತ್ಸವದ ಪಾಸ್ ವಿತರಣೆ

26
Share

 

*ಅ.9 ಕ್ಕೆ ಚಲನಚಿತ್ರೋತ್ಸವದ ಪಾಸ್ ವಿತರಣೆ*

ಮೈಸೂರು ಅ.- ಮೈಸೂರು ದಸರಾ ಮಹೋತ್ಸವ 2023 ರ ಹಿನ್ನೆಲೆಯಲ್ಲಿ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಅಕ್ಟೋಬರ್ 16 ರಿಂದ 22 ರವರೆಗೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಹಾಗೂ ಡಿ ಆರ್ ಸಿ ಪರದೆಗಳಲ್ಲಿ ಚಲನಚಿತ್ರಗಳ ಪ್ರದರ್ಶನ ಹಮ್ಮಿಕೊಂಡಿದ್ದು, *ಈ ಸಂಬಂಧ ಅ.9 ರಂದು (ಸೋಮವಾರ) ಬೆಳಗ್ಗೆ 10.30 ರಿಂದ ಸಂಜೆ 4.30 ರವರೆಗೆ ನಗರದ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಸಿನಿಮಾ ಪ್ರಿಯರಿಗೆ ಚಲನ ಚಿತ್ರೋತ್ಸವ ಪ್ರದರ್ಶನದ ಪಾಸ್ ವಿತರಣೆ ಮಾಡಲಾಗುವುದು*

ಚಲನಚಿತ್ರೋತ್ಸವ ಪಾಸ್ ದರ ಸಾಮಾನ್ಯರಿಗೆ 500 ರೂ.ಗಳಾಗಿದ್ದು ಸ್ಟೂಡೆಂಟ್ಸ್ ಗಳಿಗೆ 300 ರೂ.ಗಳಾಗಿರುತ್ತವೆ. ಈ ಪಾಸ್ ಏಳು ದಿನಗಳವರೆಗೂ ಚಾಲ್ತಿಯಲ್ಲಿರುತ್ತದೆ. ಪಾಸ್ ಪಡೆದುಕೊಳ್ಳಲು ಆಧಾರ್ ಕಾರ್ಡ್ ಪ್ರತಿಯನ್ನು ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಶ್ರೇಯಸ್, ಮೊ.ಸಂ: 7411564510 ಅನ್ನು ಸಂಪರ್ಕಿಸಬಹುದು ಎಂದು ಚಲನಚಿತ್ರೋತ್ಸವ ಉಪಸಮಿತಿಯ ವಿಶೇಷಾಧಿಕಾರಿಗಳಾದ ಎಂ ಕೆ ಸವಿತಾ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share