ಇಸ್ರೋ ವಿಜ್ಞಾನಿಗಳಿಗೆ ಸರ್ಕಾರದಿಂದ ವಿಶೇಷ  ಸನ್ಮಾನ*

23
Share

*ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ : ಐತಿಹಾಸಿಕ ಸಾಧನೆ : ಮುಖ್ಯ ಮಂತ್ರಿ ಸಿದ್ದರಾಮಯ್ಯ*

.ಬೆಂಗಳೂರು, ಆಗಸ್ಟ್ 24: ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಇಳಿದಿರುವುದು ಐತಿಹಾಸಿಕ ಸಾಧನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಳಿಗ್ಗೆ ಇಸ್ರೋ ಸಂಸ್ಥೆಗೆ ಭೇಟಿ ನೀಡಿ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

*ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು*
ಇಸ್ರೋ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆಗೆ ನೋಡುವಂಥ ಕೆಲಸವಾಗಿದೆ . ಜಗತ್ತಿನಲ್ಲಿಯೇ ರಷ್ಯಾ, ಅಮೆರಿಕ, ಚೈನಾ ದೇಶಗಳನ್ನು ಬಿಟ್ಟರೆ ಚಂದ್ರನ ದಕ್ಷಿಣ ಭಾಗದಲ್ಲಿ ಕಾಲಿರಿಸಿರುವ ನಾಲ್ಕನೇ ದೇಶ ಭಾರತ. ನಾವೆಲ್ಲರೂ ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು ಎಂದರು.

*ಸರ್ಕಾರದ ವತಿಯಿಂದ ಸನ್ಮಾನ*
ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ವಿಜ್ಞಾನಿಗಳನ್ನು ಸರ್ಕಾರ ಗೌರವಿಸಲಿದೆ ಎಂದರು. ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ಕರ್ನಾಟಕದ 500 ವಿಜ್ಞಾನಿಗಳು ಇದರಲ್ಲಿ ಪಾಲ್ಗೊಂಡಿದ್ದು, ಅವರೆಲ್ಲರಿಗೂ ಸನ್ಮಾನಿಸಲಾಗುವುದು ಎಂದರು. 3 ಲಕ್ಷ 84 ಕಿಮೀ ಪ್ರಯಾಣ ಮಾಡಿರುವ ವಿಕ್ರಂ ಸಾಧನೆ ಕಡಿಮೆಯಲ್ಲ. ಸರ್ಕಾರದ ಸಹಕಾರ ಬೆಂಬಲ ಇರಲಿದೆ. ಇದು ದೇಶದ ಹೆಮ್ಮೆ ಎಂದರು.

*ದಿನಾಂಕ ನಿಗದಿ*
ವಿಜ್ಞಾನಿಗಳು ಹಗಲು ಇರುಳು ಎನ್ನದೆ ಇದಕ್ಕಾಗಿ ಶ್ರಮಿಸಿದ್ದಾರೆ. ದೇಶದ ಒಟ್ಟು ಒಂದು ಸಾವಿರ ವಿಜ್ಞಾನಿಗಳು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಿಂದಲೇ 500 ಜನ ಪಾಲ್ಗೊಂಡಿದ್ದಾರೆ. ಸೆಪ್ಟೆಂಬರ್ 02 ರ ನಂತರ ಸನ್ಮಾನ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ ಎಂದರು.


Share