ಎಲ್ಲ ಕ್ಷೇತ್ರದಲ್ಲೂ ಮುನ್ನುಗ್ಗುವ ಶಕ್ತಿ ಮಹಿಳೆಯರಲ್ಲಿದೆ:

494
Share

 

 

*ಎಲ್ಲ ಕ್ಷೇತ್ರದಲ್ಲೂ ಮುನ್ನುಗ್ಗುವ ಶಕ್ತಿ ಮಹಿಳೆಯರಲ್ಲಿದೆ: ಪದ್ಮಜಾ ಶ್ರೀನಿವಾಸ್*

ಮೈಸೂರು: ‘ದೇಶದ ಪ್ರತಿಯೊಬ್ಬ ಮಹಿಳೆಯರು ಆರ್ಥಿಕ, ಸಾಮಾಜಿಕ, ಕೌಟುಂಬಿಕ ಹಾಗೂ ಔದ್ಯೋಗಿಕವಾಗಿ ಜಾಗೃತರಾಗುತ್ತಿದ್ದಾರೆ. ಅಲ್ಲದೇ ಎಲ್ಲ ಕ್ಷೇತ್ರದಲ್ಲೂ ಧೈರ್ಯ, ಆತ್ಮವಿಶ್ವಾಸದಿಂದ ಮುನ್ನುಗ್ಗುವ ಶಕ್ತಿ ಮಹಿಳೆಯರಲ್ಲಿದೆ’ ಎಂದು ಒಕ್ಕಲಿಗ ಲೇಡೀಸ್ ಅಸೋಸಿಯೇಷನ್ ಅಧ್ಯಕ್ಷರಾದ ಪದ್ಮಜಾ ಶ್ರೀನಿವಾಸ್ ಹೇಳಿದರು.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ವಿಜಯನಗರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಒಕ್ಕಲಿಗ ಲೇಡೀಸ್ ಅಸೋಸಿಯೇಷನ್ ಮಹಿಳೆಯರಿಗೆ
ಹಮ್ಮಿಕೊಂಡ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.

‘ಇಂದಿನ ದಿನಗಳಲ್ಲಿ ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಾಗದೆ, ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬರುತ್ತಿದ್ದಾರೆ. ಕುಟುಂಬದ ನಿರ್ವಹಣೆಯ ಹಾಗೂ ಸರ್ಕಾರಿ ಕಚೇರಿ ಕೆಲಸದ ಜೊತೆಗೆ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ನಿರ್ವಹಿಸುವ ಕೆಲಸ ಮಹಿಳೆಯರು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಹಿಳೆಯರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದು. ಅಲ್ಲದೇ, ಹೊಸ ಚೈತನ್ಯ ಹಾಗೂ ಆರೋಗ್ಯ ಆಯಸ್ಸು ವೃದ್ಧಿಸುತ್ತದೆ. ಮುಂದಿನ ದಿನಗಳಲ್ಲಿ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸ ಕೊಡಿಸುವ ಮೂಲಕ ಆಡಳಿತದ ಉನ್ನತ ಹುದ್ದೆಗಳು ದೊರಕುವಂತೆ ಮಾಡಬೇಕು ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ
ಉಸ್ತುವಾರಿಯನ್ನು ಅಸೋಸಿಯೇಷನ್ ಅಧ್ಯಕ್ಷರಾದ ಪದ್ಮಜಾ ಶ್ರೀನಿವಾಸ್, ಉಪಾಧ್ಯಕ್ಷರಾದ ನಳಿನ ಮಂಜು, ಕಾರ್ಯದರ್ಶಿಯರಾದ ಶೋಭಾ ಮಂಜುನಾಥ್, ಭವ್ಯ ರಘು, ಖಜಾಂಚಿಯಾದ ಸುಮಾ ಅನಿಲ್, ವನಿತಾ ರವಿ, ನಿರ್ದೇಶಕರುಗಳಾದ ವಿಜಯ ಮಂಜುನಾಥ್, ನವೀನ ರಂಗರಾಜು, ನಮತಾ ಮಂಜುನಾಥ್, ಹಾಗೂ ಆಟಗಳ ಉಸ್ತುವಾರಿಯನ್ನು ಕಾಲೇಜಿನ ಮುಖ್ಯಸ್ಥರಾದ ಡಾ. ಜಯಪ ಹೊನ್ನಾಳಿಯವರು ವಹಿಸಿದ್ದರು


Share