ಕಟ್ಟಡ ಕಾರ್ಮಿಕರಿಗೆ ಕಾರ್ಮಿಕರ ಕಾರ್ಡ್ ವಿತರಣೆ

57
Share

 

ಕಟ್ಟಡ ಕಾರ್ಮಿಕರಿಗೆ ಕಾರ್ಮಿಕರ ಕಾರ್ಡ್ ವಿತರಣೆ

ಮೈಸೂರು: ನಗರದ ನ್ಯೂ ಸಯ್ಯಾಜಿರಾವ್‌ ರಸ್ತೆಯಲ್ಲಿರುವ ಜೀವಧಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಶುಕ್ರವಾರ ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದಿಂದ 26 ಮಂದಿ ಕಟ್ಟಡ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕರ ಕಾರ್ಡ್ ಮತ್ತು 6 ಮಂದಿಗೆ ವೃದ್ಧಾಪ್ಯ ವೇತನ (ಪಿಂಚಣಿ) ವನ್ನು ವಿತರಣೆ ಮಾಡಲಾಯಿತು.

ಈ ವೇಳೆ ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ರಾಜ್ಯ ಸಂಚಾಲಕ ಉಮೇಶ್ ಮಾತನಾಡಿ, ಕೇಂದ್ರ ಸರ್ಕಾರದ ಸಾಧನೆಗಳು, ಪ್ರಧಾನಮಂತ್ರಿ ಆವಾಸ್ ಯೋಜನೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಕಟ್ಟಡ ಕಾರ್ಮಿಕರಿಗೆ ದೊರೆಯುವ ಸೌಲಭ್ಯಗಳ ಕುರಿತು ಕಟ್ಟಡ ಕಾರ್ಮಿಕರಿಗೆ ಮಾಹಿತಿ ನೀಡಿದರು.ಜೀವಧಾರ ರಕ್ತ ನಿಧಿ ಕೇಂದ್ರದ ಅಧ್ಯಕ್ಷ ಗಿರೀಶ್‌, ಚಾಮರಾಜ ಕ್ಷೇತ್ರ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಸೂರಜ್, 24ನೇ ವಾರ್ಡ್ ಬಿಜೆಪಿ ಅಧ್ಯಕ್ಷ ವಿಜಯ್ ಕುಮಾರ್, ಮುಖಂಡ ಮರಿಸ್ವಾಮಿ ಇತರರು ಹಾಜರಿದ್ದರು.


Share