ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಚುನಾವಣೆ ಪ್ರಕ್ರಿಯೆ ಯಶಸ್ವಿಗೊಳಿಸಿ

36
Share

ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಚುನಾವಣೆ ಪ್ರಕ್ರಿಯೆ ಯಶಸ್ವಿಗೊಳಿಸಿ

– ಪಿ.ಎಸ್.ವಸ್ತ್ರದ್

ಮೈಸೂರು ಏ.20  ಲೋಕಸಭಾ ಸಾರ್ವತ್ರಿಕ ಚುನಾವಣೆ ಏ.26 ರಂದು ನಡೆಯಲಿದ್ದು, ಮತದಾನದ ದಿನದಂದು ಕಡ್ಡಾಯವಾಗಿ ಮತಗಟ್ಟೆಗಳಿಗೆ ಬಂದು ಎಲ್ಲರೂ ಮತದಾನ ಮಾಡಿ ಎಂದು ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಅವರು ತಿಳಿಸಿದರು.

ಅವರು ಇಂದು ನಗರದ ಟೆನ್ನಿಸ್ ಕ್ಲಬ್ ನಲ್ಲಿ ಹಮ್ಮಿಕೊಂಡಿದ್ದ ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರು ಅಗತ್ಯ ಮಾಹಿತಿ ಪಡೆಯಲು, ಪ್ರತಿಕ್ರಿಯೆ, ಸಲಹೆ ಹಾಗೂ ದೂರು ಸಲ್ಲಿಸಲು ಅನುಕೂಲ ಆಗುವಂತೆ ಮತದಾರರ ಸಹಾಯವಾಣಿ 1950ಗೆ ಕರೆ ಮಾಡಬಹುದಾಗಿದೆ ಎಂದು ಅವರು ತಿಳಿಸಿದರು.

ಮತದಾರರು ಮತದಾನದಿಂದ ದೂರ ಉಳಿಯಬಾರದು. ಪ್ರತಿಯೊಬ್ಬರು ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಿ ಸದೃಡ ಭಾರತದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಎನ್.ಎನ್. ಮಧು, ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಶಾಂತಾ, ಮಹಾನಗರಪಾಲಿಕೆಯ ಕಾರ್ಯಪಾಲಕ ಅಭಿಯಂತರಾದ ನಾಗರಾಜ್, ವಲಯ ಆಯುಕ್ತರಾದ ರೇಖಾ ಶೆಟ್ಟಿ, ಪರಿಸರ ಅಭಿಯಂತರಾದ ಮೈತ್ರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 


Share