ಕರೊನ- ಲೇಟೆಸ್ಟ್ -ಖಾಸಗಿ ಆಸ್ಪತ್ರೆಗಳು ಮೃತದೇಹ ಕೊಡಲು ನಿರಾಕರಿಸುವಂತಿಲ್ಲ -ಸರಕಾರ

331
Share

ಸಾಂದರ್ಭಿಕ ಚಿತ್ರ

ರಾಜ್ಯದ ಅನೇಕ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ 19 ಸೋಂಕಿತರು ಮೃತಪಟ್ಟಲ್ಲಿ ಆಸ್ಪತ್ರೆಯ ಹಾಗೂ ಚಿಕಿತ್ಸೆಯ ಬಾಕಿ ವೆಚ್ಚವನ್ನು ಪಾವತಿಸಿದ ನಂತರವೇ ಶವವನ್ನು ಸಂಬಂಧಿಕರಿಗೆ ನೀಡುವಂತೆ ಷರತ್ತನ್ನು ವಿಧಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಸರಕಾರ ತಿಳಿಸಿದ್ದು
ಕರ್ನಾಟಕ ಪ್ರೈವೇಟ್ ಮೆಡಿಕಲ್‌ ಎಸ್ಟಾಬ್ಲಿಷ್‌ಮೆಂಟ್ ಆಕ್ಟ್’ (ಕೆಪಿಎಂಇ), 2007 .ಭಾಗ 11 (i) ಉಪ ಷರತ್ತು (vi) ರ ಅನ್ವಯ, ಮೃತ ವ್ಯಕ್ತಿಯ ದೇಹವನ್ನು ಹಸ್ತಾಂತರಿಸುವ ವೇಳೆ ಆಸ್ಪತ್ರೆಯ ಬಾಕಿ ಬಿಲ್ ಪಾವತಿಗೆ ಒತ್ತಾಯಿಸುವಂತಿಲ್ಲ / ಒತ್ತಡ ಹೇರುವಂತಿಲ್ಲ ಹಾಗೂ ಬಿಲ್ ಪಾವತಿ ಮಾಡದೆ ಇದ್ದ ಪಕ್ಷದಲ್ಲ ಮೃತದೇಹದ ಹಸ್ತಾಂತರ ಮಾಡಲು ನಿರಾಕರಿಸುವಂತಿಲ್ಲ ಎಂದು ಸುತ್ತೋಲೆ ಹೊರಡಿಸಿದೆ .
ಇಂತಹ ಪ್ರಕರಣಗಳು ವರದಿಯಾದಲ್ಲಿ ಕೆಪಿಎಂಇ ಕಾಯ್ದೆಯ ನಿಯಮಾನುಸಾರ ಸದರಿ ಆಸ್ಪತ್ರೆಯ ನೋಂದಣಿಯನ್ನು ರದ್ದುಗೊಳಿಸಿ ಸೂಕ್ತ ಕ್ರಮವನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು (ಅಧ್ಯಕ್ಷರು ಕೆಪಿಎಂಇ) ಇವರು ಕಾರ್ಯಪ್ರವೃತ್ತರಾಗಲು ಸೂಚಿಸಿದೆ. ಮುಂದುವರೆದು, ಈ ರೀತಿ ವರದಿಯಾದ ಪ್ರಕರಣಗಳ ಮಾಹಿತಿ ಹಾಗೂ ಕೈಗೊಂಡ ಕ್ರಮಗಳ ಕುರಿತು ವಾರಕ್ಕೆ ಒಂದು ಬಾರಿ, ರಾಜ್ಯ ಮಟ್ಟಕ್ಕೆ ವರದಿ ಸಲ್ಲಸಲು ಸರಕಾರ ಆದೇಶಿಸಿದೆ.


Share