ಕೇಂದ್ರದಿಂದ ರಾಜ್ಯಕ್ಕೆ 45000 ಕೋಟಿ ನಷ್ಟ : ಸಿ ಎಮ್ ಸಿದ್ದರಾಮಯ್ಯ

233
Share

ಮೈಸೂರು ಪತ್ರಿಕೆ :

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕಡಿತ ಮಾಡಿರುವ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದರಿಂದ ಕಳೆದ ನಾಲ್ಕು ವರ್ಷಗಳಿಂದ ರಾಜ್ಯಕ್ಕೆ 45 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದಿದ್ದಾರೆ.
ಕನ್ನಡಿಗರು ಕಟ್ಟುವ ತೆರಿಗೆ ರಾಜ್ಯದ ಕಷ್ಟಕಾಲಕ್ಕೆ ಉಪಯೋಗವಾಗದೆ ಉತ್ತರದ ರಾಜ್ಯಗಳಿಗೆ ಹೋಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಕರ್ನಾಟಕವು 15 ನೇ ಹಣಕಾಸು ಆಯೋಗದ ನಂತರ ಕಡಿಮೆ ತೆರಿಗೆ ಹಂಚಿಕೆ ಪಾಲನ್ನು ಪಡೆಯುತ್ತಿದೆ. ಇದರ ಪರಿಣಾಮವಾಗಿ ಕಳೆದ 4 ವರ್ಷಗಳಲ್ಲಿ 45,000 ಕೋಟಿ ರೂ ನಷ್ಟವಾಗಿದೆ. ಈ ಅನ್ಯಾಯ ಸಹಿಸಲು ಸಾಧ್ಯವಿಲ್ಲ,’’ ಎಂದು ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.
ನಮ್ಮ ರಾಜ್ಯದ ಪಾಲು ಪಡೆಯಲು ಕನ್ನಡಿಗರಿಗೆ ನ್ಯಾಯ ಕ್ಕಾಗಿ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ” ಎಂದು ಅವರು “#SouthTaxMovement” ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ತೆರಿಗೆ ವಿಚಾರದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರು (ಸಂಸದರೂ) ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಈ ಹೇಳಿಕೆಗಳು ಬಂದಿವೆ.


Share