ಕೋರೋನ ಸೋಂಕು ಮೈಸೂರು ಜಿಲ್ಲೆಯಲ್ಲಿ ಹೆಚ್ಚುವ ಸಂಭವ ಜಿಲ್ಲಾಧಿಕಾರಿ.

1510
Share

ಮೈಸೂರು ನಗರ ಮತ್ತು ಜಿಲ್ಲೆಯಾದ್ಯಂತ ಪ್ರತಿ ದಿನ ಕೋವಿಡ್ -19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಕೊರೋನಾ ವೈರಾಣು ಸೋಂಕಿಗೆ ಸಂಬಂಧಪಟ್ಟಂತೆ ಪರೀಕ್ಷೆಗಳನ್ನು ಹೆಚ್ಚುಗೊಳಿಸುವ ಅಗತ್ಯತೆ ಇರುತ್ತದೆ . ಎಂದು ಮೈಸೂರು ಜಿಲ್ಲಾಧಿಕಾರಿ ಶರತ್ ಅವರು ತಿಳಿಸಿದರು .ಪ್ರಸ್ತುತ ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಸದರಿ ಪರೀಕ್ಷೆಗಳನ್ನು ನಡೆಸಲು ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇರುವ ಹಿನ್ನೆಲೆಯಲ್ಲಿ ಖಾಸಗಿ ಪ್ರಯೋಗ ಶಾಲಾ ತಂತ್ರಜ್ಞರು ಹಾಗೂ ದತ್ತಾಂಶ ನಮೂದಕರನ್ನು ( Data Entry Operators ) ನೇಮಿಸಿಕೊಳ್ಳುವುದು ಅಗತ್ಯವಾಗಿದೆ . ಸರ್ಕಾರವು ಪ್ರಯೋಗ ಶಾಲಾ ತಂತ್ರಜ್ಞರು ಲಭ್ಯವಿಲ್ಲದಿದ್ದಲ್ಲಿ Nursing and Paramedical Personnel / Diploma Holders / ವಿಜ್ಞಾನ ಪದವೀಧರರನ್ನು ಸದರಿ ಕಾರ್ಯಕ್ಕೆ ನಿಯೋಜಿಸಿಕೊಳ್ಳಲು ಅವಕಾಶ ಕಲ್ಪಿಸಿದೆ . ಗೋಷ್ಠಿಯಲ್ಲಿ ಉದ್ದೇಶಿಸಿ ಮಾತನಾಡುತ್ತಾ ಕೊರೋನಾ ಪರೀಕ್ಷೆಗೆ ನೇಮಕ ಮಾಡಿಕೊಳ್ಳಲಾಗುವವರಿಗೆ ಸರ್ಕಾರವು ನಿಗದಿಪಡಿಸಿರುವ ದರದಲ್ಲಿ ಪ್ರಯೋಗ ಶಾಲಾ ತಂತ್ರಜ್ಞರಿಗೆ ರೂ .10,000 / – + ಪ್ರತಿ ಗಂಟಲುದ್ರವ ತೆಗೆಯುವಿಕೆಗೆ ರೂ .15 / – ಹಾಗೂ ದತ್ತಾಂಶ ನಮೂದಕರಿಗೆ ರೂ .14,000 / – ಗಳ ಸಂಭಾವನೆಯನ್ನು ಮಾಸಿಕವಾಗಿ ನೀಡಲಾಗುವುದು . ಈ ಹಿನ್ನಲೆಯಲ್ಲಿ ಮೈಸೂರು ನಗರ ಮತ್ತು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಕೊರೋನಾ ವೈರಾಣು ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ನಡೆಸಲು ಆಸಕ್ತರಾದ Nursing and Paramedical Personnel / Diploma Holders | ವಿಜ್ಞಾನ ಪದವೀಧರರು ಹಾಗೂ ದತ್ತಾಂಶ ನಮೂದಕರು ( Data Entry Operators ) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಅಥವಾ ಸಂಬಂಧಪಟ್ಟ ತಾಲ್ಲೂಕು ವೈದ್ಯಾಧಿಕಾರಿಗಳ ಕಛೇರಿಯಲ್ಲಿ ದಿ : 30.09.2020 ರೊಳಗೆ ದಾಖಲಾತಿಗಳೊಂದಿಗೆ ಮನವಿಯನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಲು ತಿಳಿಸಲಾಗಿದೆ .ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಒ. ಹಾಗೂ ಇತರ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.


Share