ಕೋವಿಡ್ ಸಮಯ ಅರಿಸಿನ ಗಣಪ ಉತ್ತಮ:ಎಚ್ ವಿ ರಾಜೀವ್

329
Share

 

ಪರಿಸರ ಸ್ನೇಹಿ ಗಣೇಶ ಸಿದ್ಧಪಡಿಸಲು ಸಲಹೆ
ಕೋವಿಡ್ ಸಮಯ ಅರಿಸಿನ ಗಣಪ ಉತ್ತಮ:ಎಚ್ ವಿ ರಾಜೀವ್

 

ಜೆಎಲ್ ಬಿ ರಸ್ತೆಯಲ್ಲಿರುವ ಮೈಸೂರು ನಗರಾಭಿವೃದ್ಧಿ ಆವರಣದಲ್ಲಿ ಪರಿಸರ ಸ್ನೇಹಿ ಬಳಗ , ವತಿಯಿಂದ ಏರ್ಪಡಿಸಿದ್ದ ಪರಿಸರ ಸ್ನೇಹಿ ಅರಿಸಿನ ಗಣೇಶ ಅಭಿಯಾನದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಎಚ್ ವಿ ರಾಜೀವ್ ಭಿತ್ತಿಪತ್ರ ಬಿಡುಗಡೆಗೊಳಿಸಿದರು

ಪ್ರತಿಯೊಬ್ಬರೂ ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು’ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಚ್ ವಿ ರಾಜೀವ್ ಹೇಳಿದರು.

ಮೈಸೂರು ನಗರ ಮತ್ತು ತಾಲ್ಲೂಕು ಮಟ್ಟದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ ಅಭಿಯಾನದಲ್ಲಿ ಈ ವಿಷಯ ತಿಳಿಸಿದರು. ಈ ಜಾಗೃತಿ ಉಳ್ಳ ಕರಪತ್ರ ಮೈಸೂರು ನಗರ ಹಾಗೂ ಜಿಲ್ಲಾ ಸುತ್ತಮುತ್ತ ಸಾರ್ವಜನಿಕ ಸ್ಥಳದಲ್ಲಿ ಬಿತ್ತಿಪತ್ರ ಅಂಟಿಸಿ ಜಾಗೃತಿ ಮೂಡಿಸಲಾಗುವುದು ಹಾಗೆಯೇ ಸಾಮಾಜಿಕ ಜಾಲತಾಣ ಸೇರಿದಂತೆ ಇನ್ನಿತರ ಪ್ರಚಾರವನ್ನು ಹೆಚ್ಚು ಮಾಡಿ ಈ ಬಾರಿ ಪರಿಸರ ಸ್ನೇಹಿ ಗಣೇಶ ಅಭಿಯಾನವನ್ನು ಮಾಡಲಾಗುವುದು

ನಂತರ ಭಿತ್ತಿಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿ, ‘ಕೋವಿಡ್ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಣೇಶ ಹಬ್ಬದ ಸಂದರ್ಭ ಅರಿಸಿನ ಗಣೇಶ ಮೂರ್ತಿ ತಯಾರಿಸಲು ಇಂತಹ ಜಾಗೃತಿ ಆಂದೋಲನ ಸಹಕಾರಿಯಾಗಿದೆ. ಕೋವಿಡ್ ಮಾರ್ಗಸೂಚಿಯನ್ವಯ ಈ ಬಾರಿ ವೈರಾಣು ನಿರೋಧಕ ಗಣೇಶ ಮೂರ್ತಿಯನ್ನು ಮನೆಯಲ್ಲೇ ಪೂಜಿಸಿದ ನಂತರ ಮನೆಯಲ್ಲೇ ವಿಸರ್ಜಿಸುವ ಕುರಿತು ಜನಜಾಗೃತಿ ಮೂಡಿಸುತ್ತಿರುವುದು ಉತ್ತಮವಾದ ಕಾರ್ಯ’ ಎಂದರು.

ಪರಿಸರಸ್ನೇಹಿ ತಂಡದವರು ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳು ಮತ್ತು ನಾಗರಿಕರಲ್ಲಿ ಅರಿಸಿನ ಗಣೇಶ ಮೂರ್ತಿಗಳನ್ನು ತಯಾರಿಸುವ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್ ವಿ ರಾಜೀವ್ ,ನಗರ ಪಾಲಿಕಾ ಸದಸ್ಯರಾದ ಶಿವಕುಮಾರ್ ,ಬಿ ವಿ ಮಂಜುನಾಥ್ ,ಸತ್ಯರಾಜ್ ,ಮಾಜಿ ನಗರ ಪಾಲಿಕಾ ಸದಸ್ಯರಾದ ಜಗದೀಶ್ ,ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಎಚ್ ಜಿ ಗಿರಿಧರ್ ,ಲಕ್ಷ್ಮಿದೇವಿ ,
ಜೀವದಾರ ಗಿರೀಶ್ ,ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್ ,ಮುನಿರತ್ನ ,ರಂಗನಾಥ್ ,ಹಾಗೂ ಇನ್ನಿತರರು ಹಾಜರಿದ್ದರು


Share