ಕ್ರಿಕೆಟ್ ಆಟಗಾರ ರಿಷಬ್ ಪಂತ್ ಕಾರು ಅಪಘಾತ : ತೀವ್ರ ಗಾಯ

212
Share

ಹೊಸದಿಲ್ಲಿ: ಭಾರತ ತಂಡದ ವಿಕೆಟ್‌ಕೀಪರ್‌ ಬ್ಯಾಟ್ಸ್‍ಮನ್ ರಿಷಬ್‌ ಪಂತ್‌ ತವರಿಗೆ ಮರಳುತ್ತಿದ್ದ ವೇಳೆ ದೆಹಲಿ-ಡೆಹರಾಡೂನ್‌ ಹೆದ್ದಾರಿಯಲ್ಲಿ ರೂರ್ಕಿ ಬಳಿ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಇತ್ತೀಚಿನ ವರದಿಗಳ ಪ್ರಕಾರ, ಅವರನ್ನು ರಿಷಿಕೇಶದ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಅವರ ಹಣೆ, ಬೆನ್ನು ಮತ್ತು ಕಾಲುಗಳಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಕಾರು ರಸ್ತೆಯ ವಿಭಾಜಕ್ಕೆ ಹೊಡೆದು ಬೆಂಕಿ ಹತ್ತಿಕೊಂಡಿತ್ತು ಎಂದು ವರದಿಯಾಗಿದೆ.
ಉತ್ತರಾಖಂಡದ ಮುಖ್ಯಮಂತ್ರಿ ಧಾಮಿಯವರು ಪರಿಸ್ಥಿತಿಯ ಬಗ್ಗೆ ವಿಚಾರಿಸುತ್ತಿದ್ದಾರೆ.


Share