ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರು : ಮೋದಿ

137
Share

ನವದೆಹಲಿ: ಚಂಡೀಗಢ ವಿಮಾನ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಹೆಸರನ್ನು ಮರುನಾಮಕರಣ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಭಾಷಣ “ಮನ್ ಕಿ ಬಾತ್” ನಲ್ಲಿ ಘೋಷಿಸಿದರು.
“ಮಹಾನ್ ಸ್ವಾತಂತ್ರ್ಯ ಹೋರಾಟಗಾರನಿಗೆ ಗೌರವವಾಗಿ, ಚಂಡೀಗಢ ವಿಮಾನ ನಿಲ್ದಾಣಕ್ಕೆ ಈಗ ಶಹೀದ್ ಭಗತ್ ಸಿಂಗ್ ಹೆಸರಿಡಲು ನಿರ್ಧರಿಸಲಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.


Share