ಚಾಮುಂಡಿ ಬೆಟ್ಟದಲ್ಲಿ ನಡೆದ ಈ ಸ್ವಚ್ಛತಾ ಆಂದೋಲನ

86
Share

 

ಮೈಸೂರುಸಂಸ್ಕೃತಿಕ ರಾಜಧಾನಿ ಮೈಸೂರು ಸ್ವಚ್ಛ ನಗರ ಎಂಬ ಹೆಸರಿಗೆ ಕಲಶಪ್ರಾಯವಾಗಿರುವ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಇರುವ ಸನ್ನಿದಿ ಹೆಮ್ಮೆಯ ಚಾಮುಂಡಿ ಬೆಟ್ಟದಲ್ಲಿ ಐಕ್ಯಂ ತಂಡದಿಂದ ಭಾನುವಾರದಂದು ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವು ಐಕ್ಯಂ ಎಂಬ ತಂಡವು ಆಯೋಜಿಸಿದ್ದು, ಯುವರಾಜ ಕಾಲೇಜಿನ ಎನ್.ಸಿ.ಸಿ (ನೇವಿ) ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಾರ್ವಜನಿಕರು ಇದರಲ್ಲಿ ಭಾಗಿಯಾಗಿದ್ದರು.

ಚಾಮುಂಡಿ ಬೆಟ್ಟದಲ್ಲಿ ನಡೆದ ಈ ಸ್ವಚ್ಛತಾ ಆಂದೋಲನದಲ್ಲಿ ತೆಗೆದ ಪ್ಲಾಸ್ಟಿಕ್ ತ್ಯಾಜ್ಯವನ್ನು ಮೈಸೂರಿನ ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್ ಗೆ ನೀಡಲಾಯಿತು. ಈ ಸಂಸ್ಥೆಯು ಪ್ಲಾಸ್ಟಿಕ್ ತ್ಯಾಜ್ಯದಿಂದ ಪಾದಚಾರಿ ಮಾರ್ಗಗಳಿಗೆ ನೆಲಹಾಸು ಹಾಗೂ ಗೃಹ ನಿರ್ಮಾಣ ಕ್ಷೇತ್ರಕ್ಕೆ ಅನುಕೂಲವಾಗುವ ಇಟ್ಟಿಗೆಗಳನ್ನು ಹಾಗೂ ತಯಾರು ಮಾಡುತ್ತದೆ.

ವಿದ್ಯಾರ್ಥಿಗಳು ಚಾಮುಂಡಿ ಬೆಟ್ಟದ ಮೆಟ್ಟಿಲುಗಳ ಬಳಿ ಬಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಬೇರ್ಪಡಿಸಿ ಅದನ್ನು ಮರುಬಳಕೆ ಮಾಡುವ ಕಾರ್ಯಕ್ಕೆ ಸಾಕ್ಷಿಯಾಗಿದ್ದಾರೆ. ಈ ಸ್ವಚ್ಛತಾ ಆಂದೋಲನದ ಮೂಲಕ ಪರಿಸರ ಸಂರಕ್ಷಣೆಯ ಹೊಣೆ ಹೊತ್ತಿದ್ದಾರೆ. ಈ ಕಾರ್ಯಕ್ರಮ ಚಾಮುಂಡಿ ಬೆಟ್ಟದ ಅರಣ್ಯ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾಡಳಿತ ಸಹಕಾರ ನೀಡಿವೆ.
ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ


Share