ಚುನಾವಣಾ ಫಲಿತಾಂಶ ಬಂದ ನಂತರ ಮುಂದಿನ ಮುಖ್ಯಮಂತ್ರಿ ನಿರ್ಧಾರ : ಬಿಎಸ್ ವೈ

137
Share

ಹಿರಿಯೂರು (ಚಿತ್ರದುರ್ಗ): ವಿಧಾನಸಭಾ
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ವಿಜಯ ಸಂಕಲ್ಪ ಯಾತ್ರೆಗೆ ಸೋಮವಾರ ಹಿರಿಯೂರು ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಬಿಜೆಪಿಗೆ ನಿರೀಕ್ಷೆ ಮೀರಿದ ಪ್ರತಿಸ್ಪಂದನೆ ವ್ಯಕ್ತವಾಗುತ್ತಿದೆ. ಚುನಾವಣೆಯಲ್ಲಿ 140ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ. ‘ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಕೆಲವರು ಮಾತನಾಡುತ್ತಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.


Share