ಜಿಲ್ಲಾಧಿಕಾರಿ ಕಚೇರಿಗೆ ಬರಬೇಡಿ ಡಿಸಿ ಮನವಿ

374
Share

ಸಾರ್ವಜನಿಕರು ಅತೀ ಜರೂರಲ್ಲದ ಕೆಲಸಗಳಿಗೆ ಸರ್ಕಾರಿ ಕಚೇರಿಗೆ ಬರಬೇಡಿ: ಡಿಸಿ ಸೂಚನೆ
ಮೈಸೂರು, ಜುಲೈ,10.(ಕರ್ನಾಟಕ ವಾರ್ತೆ):- ಮೈಸೂರು ಜಿಲ್ಲೆಯಲ್ಲಿ ಕೊರೊನಾ ವೈರಾಣು ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅತೀ ಜರೂರಲ್ಲದ ಅನಗತ್ಯ ಕೆಲಸಗಳಿಗೆ ಆಗಮಿಸದಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಸೂಚಿಸಿದ್ದಾರೆ.
ಸರ್ಕಾರಿ, ಅರೆಸರ್ಕಾರಿ, ನಿಗಮ ಹಾಗೂ ಮಂಡಳಿಗಳಲ್ಲಿ ಕೋವಿಡ್ ಹರಡುವುದನ್ನು ತಡೆಗಟ್ಟಲು ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಕಾರ್ಯನಿರ್ವಹಿಸುತ್ತಿದ್ದು, ಅವರ ಮತ್ತು ಅವರ ಕುಟುಂಬದ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಸಾರ್ವಜನಿಕರು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಕಚೇರಿಗೆ ಆಗಮಿಸುವಂತೆ ತಿಳಿಸಿದ್ದಾರೆ.
ಕೋವಿಡ್ ಹರಡುವುದನ್ನು ತಡೆಗಟ್ಟಲು ಎಲ್ಲಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಅವರು ಕಚೇರಿ ಹಾಗೂ ಅವರ ಅಧೀನದಲ್ಲಿ ಬರುವ ಕಚೇರಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದರೊಂದಿಗೆ ಸಂಬಂಧಪಟ್ಟ ಕಚೇರಿಗೆ ಸಾರ್ವಜನಿಕರು ನೀಡುವ ಮನವಿ ಸ್ವೀಕರಿಸಲು ಹಾಗೂ ಅವರ ಕುಂದುಕೊರತೆಗಳಿಗೆ ಮಾಹಿತಿ ನೀಡುವ ಸಲುವಾಗಿ KIOSK ಅನ್ನು ಸ್ಥಾಪಿಸಿ ಅಲ್ಲಿಯೇ ಸಾರ್ವಜನಿಕರ ಮನವಿಗಳನ್ನು ಸ್ವೀಕರಿಸಿ ಪ್ರತ್ಯೇಕವಾಗಿಡಲು ಹಾಗೂ ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ನೀಡುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ.
ಸಾರ್ವಜನಿಕರೊಂದಿಗೆ ವ್ಯವಹರಿಸುವ ಸಂದರ್ಭದಲ್ಲಿ KIOSK ನಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸದ್ದಾರೆ


Share