ದಸರಾ:ಪ್ರಮೋದಾದೇವಿ ಒಡೆಯರ್ ಗೆ ಸಚಿವ ರಿಂದ ಆಹ್ವಾನ

144
Share

 

ಮೈಸೂರು- ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಶನಿವಾರ ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲಪುಷ್ಪ ತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆಹ್ವಾನ ನೀಡಿದರು.

ಸಂಸದರಾದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಜಿ.ರೂಪಾ, , ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು.


Share