ದಸರಾ ಚಲನಚಿತ್ರೋತ್ಸವದಲ್ಲಿ ದಿ.ಪುನೀತ್ ಅವರ ಯಾವ ಚಿತ್ರ ಪ್ರದರ್ಶನ….

163
Share

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ದಸರಾ ಚಲನಚಿತ್ರೋತ್ಸವ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಟಿ.ಕೆ.ಹರೀಶ್ ಅವರು ಮಾತನಾಡಿ, ದಿ.ಪುನೀತ್ ರಾಜ್ ಕುಮಾರ್ ಹಾಗೂ ಸಂಚಾರಿ ವಿಜಯ್ ನಟಿಸಿರುವ ಜನಪ್ರಿಯ ಸಿನಿಮಾಗಳನ್ನು ಪ್ರದರ್ಶಿಸಲಾಗುತ್ತಿದ್ದು ಪುನಿತ್ ನಟನೆಯ ಬೆಟ್ಟದ ಹೂ, ಅಂಜನಿಪುತ್ರ, ರಾಜಕುಮಾರ್, ಮೈತ್ರಿ, ಪೃಥ್ವಿ, ಯುವರತ್ನ ಹಾಗೂ ಸಂಚಾರಿ ವಿಜಯ್ ಅಭಿನಯದ ತಲೆದಂಡ, ಪುಕ್ಸಟ್ಟೆ ಲೈಫು, ಆಕ್ಟ್ 1978 ಸಿನಿಮಾಗಳು ಪ್ರದರ್ಶನಗೊಳ್ಳಲಿದೆ ಎಂದರು.

ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಅವರು ಶಕ್ತಿಧಾಮದ ಮಕ್ಕಳೊಂದಿಗೆ ಸೆ.27ರಂದು ಪುನೀತ್ ರಾಜ್ ಕುಮಾರ್ ಅಭಿನಯಿಸಿರುವ ಬೆಟ್ಟದ ಹೂ ಚಿತ್ರವನ್ನು ವೀಕ್ಷಿಸಲಿದ್ದಾರೆ. ಚಲನಚಿತ್ರೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಟ ನಟಿಯರಾದ ಡಾ.ಶಿವರಾಜ್ ಕುಮಾರ್, ಅಮೃತ ಅಯ್ಯಂಗಾರ್, ಕಾವ್ಯಶೆಟ್ಟಿ, ಸುಧಾರಾಣಿ, ಅನುಪ್ರಭಾಕರ್ ಸೇರಿದಂತೆ ಅನೇಕ ತಾರೆಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


Share