ದಸರಾ ವಿಶ್ವ ಪ್ರವಾಸೋದ್ಯಮ ಜಾಥಾಕ್ಕೆ ಚಾಲನೆ ನೀಡಿದ ಸಚಿವ .ಸೋಮಶೇಖರ್*

192
Share

 

*ವಿಶ್ವ ಪ್ರವಾಸೋದ್ಯಮ ಜಾಥಾಕ್ಕೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್*

*ಶೀಘ್ರವಾಗಿ ಗೋಲ್ಡ್ ಪಾಸ್ ವಿತರಿಸಲು ಚಿಂತನೆ*

ಮೈಸೂರು, ):- ನಗರದ ಅರಮನೆಯ ಮುಂಭಾಗದಲ್ಲಿರು ಕೋಟೆ ಆಂಜನೇಯ ಸ್ವಾಮೀ ದೇವಸ್ಥಾನದ ಆವರಣದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ವಿಶ್ವ ಪ್ರವಾಸೋದ್ಯಮದ ಜಾಥಾ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪ್ರವಾಸಿಗರಿಗೆ ಮೈಸೂರು ದರ್ಶನ ಮಾಡಿಸುವ ಟೂರಿಸಂ ಅವರ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಾಲನೆ ನೀಡುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಗೋಲ್ಡ್ ಪಾಸ್ ಬಗ್ಗೆ ರೂಪುರೇಷೆಗಳನ್ನು ಮಾಡಿದ ನಂತರ ಸಭೆಯಲ್ಲಿ ತಿರ್ಮಾನ ಕೈಗೊಂಡು ತಿಳಿಸಲಾಗುವುದು ಎಂದರು.

ಜಿ.ಟಿ.ದೇವೇಗೌಡ ಅವರು ಮಾತನಾಡಿ, ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಈ ಬಾರಿಯ ದಸಾರ ಮಹೋತ್ಸವವನ್ನು ಅದ್ದೂರಿಯಾಗಿ ಹಾಗೂ ಯಶಸ್ವಿಯಾಗಿ ಆಚರಿಸಬೇಕು ಎಂದು ಕಳೆದ ವರ್ಷ ಘೋಷಣೆ ಮಾಡಿದ್ದರಂತೆ ನಡೆದುಕೊಳ್ಳುತ್ತಿದ್ದಾರೆ ಎಂದರು.

ಈ ವರ್ಷ ಯೋಗಾ ದಿವಸವನ್ನು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದು ಆಚರಿಸಿದ್ದು, ಈ ಬಾರಿಯ ದಸಾರ ಮಹೋತ್ಸವಕ್ಕೆ ರಾಷ್ಟ್ರಪತಿಗಳು ಬಂದು ಉದ್ಘಾಟಿಸಿದ್ದರಿಂದ ವಿಶ್ವಮಟ್ಟದಲ್ಲಿ ಮೈಸೂರನ್ನು ಹಾಗೂ ಮೈಸೂರು ದಸರಾವನ್ನು ನೋಡುವಂತೆ ಮಾಡಿದೆ. ಈ ಬಾರಿಯ ದಸರಾ ಮಹೋತ್ಸವದಲ್ಲಿ ಎಲ್ಲರೂ ಸಂಭ್ರಮದಿಂದ ಸಡಗರದಿಂದ ಆಚರಿಸುವ ಮೂಲಕ ಯಶಸ್ವಿಗೊಳಿಸೋಣ ಎಂದರು.

*ಪ್ರವಾಸಿಗರ ಮನ ಸೆಳೆದ ಕಲಾತಂಡಗಳು:-* ಇದೇ ಸಂದರ್ಭದಲ್ಲಿ ಬಾರತದ ರಾಜ್ಯಗಳ ಸಂಸ್ಕೃತಿಗಳನ್ನು ಬಿಂಬಿಸುವ ವೇಷಭೂಷಣಗಳು ಜನರ ಆಕರ್ಷಣೆಯನ್ನು ಸೆಳೆಯಿತು.

ಶಾಸಕರಾದ ಎಲ್ ನಾಗೇಂದ್ರ, ಎಸ್.ಎ.ರಾಮದಾಸ್, ಬಿಜೆಪಿ ಮುಖಂಡರಾದ ಶ್ರೀವತ್ಸ ಸೇರಿದಂತೆ ಇತರರು ಹಾಜರಿದ್ದರು.


Share