ದೆಹಲಿ ಮೆಟ್ರೋ ನಿಲ್ದಾಣದ ಬಳಿ ಭಾರಿ ಬೆಂಕಿ

200
Share

ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪವಿರುವ ಕಟ್ಟಡದಲ್ಲಿ ಇಂದು ಭಾರೀ ಬೆಂಕಿ ಕಾಣಿಸಿಕೊಂಡಿದೆ. ಸಂಜೆ 4.40ರ ವೇಳೆಗೆ ಬೆಂಕಿ ಹೊತ್ತಿಕೊಂಡ ಬಗ್ಗೆ ಮಾಹಿತಿ ಲಭಿಸಿದ್ದು, 24 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಡ್ಕಾ ಮೆಟ್ರೋ ನಿಲ್ದಾಣದ ಪಿಲ್ಲರ್ ಸಂಖ್ಯೆ 544 ರ ಸಮೀಪವಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಂದಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.


Share