ನಿರ್ಭೀತಿಯಿಂದ ಮತದಾನ ಮಾಡಿ

237
Share

 

*ನಿರ್ಭೀತಿಯಿಂದ ಮತದಾನ ಮಾಡಿ*

– *ಕೆ.ಎಂ.ಗಾಯಿತ್ರಿ*

ಮೈಸೂರು,ಏ. ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತದಾನವು ಮೇ.10 ರಂದು ನಡೆಯಲಿದ್ದು, ಯಾವುದೇ ಆಮಿಷಕ್ಕೆ ಹಾಗೂ ಒತ್ತಡಗಳಿಗೆ ಮಣಿಯದೆ ನಿರ್ಭೀತಿಯಿಂದ ಮತ ಚಲಾಯಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು ಹೇಳಿದರು.

ಬುಧವಾರ ಮೈಸೂರು ತಾಲ್ಲೂಕಿನ ಇಲವಾಲ ಗ್ರಾಮದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ನಡೆದ ಪಥ ಸಂಚಲನದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಜಾಗೃತಿ ಮೂಡಿಸಿ, ಸ್ಥಳೀಯ ಗ್ರಾಮಸ್ಥರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಿಳಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯು ಅತ್ಯಂತ ಪ್ರಮುಖವಾದ ಸಂದರ್ಭವಾಗಿದ್ದು, ಜನಪ್ರತಿನಿಧಿಗಳನ್ನು ಆಯ್ಕೆಮಾಡಲು ಸಂವಿಧಾನವು ನಮಗೆ ಮೌಲ್ಯಯುತ ಹಕ್ಕನ್ನು ನೀಡಿದೆ. ಈ ಹಕ್ಕನ್ನು ನೈತಿಕವಾಗಿ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಬೇರನ್ನು ಬಲಿಷ್ಠಗೊಳಿಸಬೇಕು ಎಂದು ಕರೆ ನೀಡಿದರು.

ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರ ಮತದಾನವೂ ಅತ್ಯಮೂಲ್ಯವಾದದ್ದು. ನಿಮ್ಮ ಮಕ್ಕಳ ಭವಿಷ್ಯದ ದೃಷ್ಟಿಕೋನದಿಂದ ಮತದಾನದ ದಿನದಂದು ಕಡ್ಡಾಯವಾಗಿ ಮತದಾನ ಮಾಡಿ. ನಿಮ್ಮ ಕುಟುಂಸ್ಥರಿಗೂ ಮತದಾನ ಮಾಡುವಂತೆ ಪ್ರೇರೆಪಿಸಿ ಎಂದು ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಇಲವಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಥಸಂಚಲನವು ನಡೆಯಿತು. ಈ ವೇಳೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್‌.ಡಿ.ಗಿರೀಶ್ ಅವರು, ಪಿಡಿಒ ಹೇಮಂತ್ ಕುಮಾರ್ ಅವರು ಸೇರಿದಂತೆ ಮುಂತಾದವರು ಹಾಜರಿದ್ದರು‌.


Share