ನ,25 ರಂದು ಆರೋಗ್ಯ ಇಲಾಖೆ ಮಳಿಗೆ ಉದ್ಗಾಟನೆ

33
Share

ಚಿತ್ರ ಕೃಪೆ ಸ್ಟಾರ್ ಆಫ್ ಮೈಸೂರು

ನವೆಂಬರ್ 25 ರಂದು ಆರೋಗ್ಯ ಇಲಾಖೆ ಮಳಿಗೆ ಉದ್ಗಾಟನೆ

 ಮೈಸೂರು.:- ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ದಸರಾ 2023-24 ನೇ ಸಾಲಿನ ಆರೋಗ್ಯ ಇಲಾಖೆ ಮಳಿಗೆ ಉದ್ಘಾಟನಾ ಸಮಾರಂಭವನ್ನು ನವೆಂಬರ್ 25 ರಂದು ಸಂಜೆ 5:30 ಕ್ಕೆ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪನವರು ಹಾಗೂ ಗೌರವ ಉಪಸ್ಥಿತಿಯನ್ನು ಪಶುಸಂಗೋಪನಾ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್ ರವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ರವರು ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸರವರು ವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹರವರು ವಿ.ಶ್ರೀನಿವಾಸ್ ಪ್ರಸಾದ್ ರವರು ಹಾಗೂ ಸುಮಲತಾ ಅಂಬರೀಶ್ ರವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರವಿಶಂಕರ್.ಡಿ,ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ.ಹರೀಶ್ ಗೌಡ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ವಿಧಾನ ಪರಿಷತ್ ಶಾಸಕರಾದ ಹೆಚ್.ವಿಶ್ವನಾಥ್, ಮರಿತಿಬ್ಬೇಗೌಡ, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಡಿ.ರಂಧೀಪ್(ಭಾ.ಆ.ಸೇ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಾದ ಡಾ.ಪುಷ್ಪಲತಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಅಭಿಯಾನ ನಿರ್ದೇಶಕರಾದ ಡಾ.ನವೀನ್.ಭಟ್.ವೈ (ಭಾ.ಆ.ಸೇ), ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸಹ ನಿರ್ದೇಶಕರಾದ ಡಾ. ಧನಂಜಯ ಅವರು ಭಾಗವಹಿಸಲಿದ್ದಾರೆ


Share