ಫ್ರಿಡ್ಜ್ ಸ್ಪೋಟದಿಂದ ಐವರ ಸಾವು

38
Share

ಚಂಡೀಗಢ:
ಪಂಜಾಬ್‌ನ ಜಲಂಧರ್ ಜಿಲ್ಲೆಯ ಮನೆಯೊಂದರಲ್ಲಿ ರೆಫ್ರಿಜರೇಟರ್‌ನ ( ಫ್ರಿಡ್ಜ್ ) ಕಂಪ್ರೆಸರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ಹೇಳಿದ್ದಾರೆ.
ಮೃತರನ್ನು ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ (12) ಮತ್ತು ಅಕ್ಷಯ್ (10) ಎಂದು ಗುರುತಿಸಲಾಗಿದೆ.
ಸ್ಫೋಟದ ನಿಖರವಾದ ಕಾರಣವನ್ನು ಕಂಡುಹಿಡಿಯಲು ಮಾದರಿಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಜ್ಞರ ತಂಡವನ್ನು ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Share