ಬಾಲಕಿಯರ ಆರೋಗ್ಯದ ಕಡೆ ವಿಶೇಷ ಗಮನ ಹರಿಸಲು ಸರ್ವೋಚ್ಚ ನ್ಯಾಯಾಲಯದ ಸೂಚನೆ

110
Share

ಹೊಸದಿಲ್ಲಿ: ಶಾಲೆಗಳಲ್ಲಿ ಋತುವಿನ ನೈರ್ಮಲ್ಯವು ಪ್ರಮುಖ ರಾಷ್ಟ್ರೀಯ ಆರೋಗ್ಯ ಸಮಸ್ಯೆ ಎಂದು ಪರಿಗಣಿಸಿದ ಸುಪ್ರೀಂ ಕೋರ್ಟ್, ಹದಿಹರೆಯದ ಶಾಲಾ ಬಾಲಕಿಯರಿಗೆ ಗುಣಮಟ್ಟದ, ಕಡಿಮೆ ವೆಚ್ಚದ ಸ್ಯಾನಿಟರಿ ಪ್ಯಾಡ್‌ಗಳನ್ನು ಮಾರಾಟ ಯಂತ್ರಗಳ ಮೂಲಕ ಒದಗಿಸುವ ಮತ್ತು ಶೌಚಾಲಯಗಳ ಅನುಪಾತದ ಕುರಿತು ಪ್ರತಿ ರಾಜ್ಯದಿಂದ ವಸತಿ ಮತ್ತು ವಸತಿ ರಹಿತ ಶಿಕ್ಷಣ ಸಂಸ್ಥೆಗಳ ಸ್ಥಿತಿ ಗತಿಯ ವರದಿಯನ್ನು ಸೋಮವಾರ ಕೇಳಿದೆ.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲಾ ಅವರ ಪೀಠವು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಿಕ್ಷಣ ಮತ್ತು ಜಲಶಕ್ತಿ ಸಚಿವಾಲಯಗಳು ಮಾಡಿದ ಕೆಲಸವನ್ನು ಗಮನಿಸಿದೆ ಮತ್ತು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳೊಂದಿಗೆ ಸಂವಹನೆ ನಡೆಸಬೇಕು ಎಂದು ಸೂಚಿಸಿದೆ. -ಶಾಲೆಗೆ ಹೋಗುವ ಹುಡುಗಿಯರಿಗೆ ಮಿಷನ್ ಮೋಡ್‌ನಲ್ಲಿ ಸ್ಯಾನಿಟರಿ ಪ್ಯಾಡ್‌ಗಳ ಲಭ್ಯವಾಗುವ ಸೌಲಭ್ಯ ನೀಡಬೇಕೆಂದು ಆದೇಶಿಸಿದೆ.
ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದು, ಆರೋಗ್ಯ ಮತ್ತು ಶಿಕ್ಷಣವು ಮೂಲಭೂತವಾಗಿ ರಾಜ್ಯದ ವಿಷಯಗಳಾಗಿದ್ದರೂ ಕೇಂದ್ರವು ಈ ಉದ್ದೇಶಕ್ಕಾಗಿ ರಾಜ್ಯಗಳಿಗೆ 197 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.


Share