ಬಿಜೆಪಿ – ಚುನಾವಣೆ ಮೊದಲು , ಸಂಪುಟ ವಿಸ್ತರಣೆ ನಂತರ

251
Share

ರಾಜ್ಯದಲ್ಲಿ ಬಹುಕಾಲದಿಂದ ಬಾಕಿ ಉಳಿದಿರುವ ಸಚಿವ ಸಂಪುಟ ಪುನಾರಚನೆಯ ಬಗ್ಗೆ ಅನಿಶ್ಚಿತತೆ ಮುಂದುವರೆದಿದ್ದು, ಬಿಜೆಪಿಯ ಉನ್ನತ ನಾಯಕತ್ವವು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಇದೆಕ್ಲಕ್ಕಿಂತ ಮುಂಚೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲ್ಲುವ ಕಡೆ ಗಮನ ಹರಿಸುವಂತೆ ಕೇಳಿಕೊಂಡಿದೆ.
ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ, ಸಚಿವ ಸಂಪುಟ ಪುನಾರಚನೆಗಿಂತ ಬಿಬಿಎಂಪಿ ಸೇರಿದಂತೆ ಇತರ ಚುನಾವಣೆ ಗೆಲ್ಲುವುದಕ್ಕೆ ಆದ್ಯತೆ ನೀಡಬೇಕು ಎಂದು ಪಕ್ಷವು ಸಿಎಂಗೆ ತಿಳಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಿಎಂ ಅರ್ಧ ಗಂಟೆಗೂ ಹೆಚ್ಚು ಕಾಲ ಭೇಟಿ ಮಾಡಿದ್ದರು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾದಲ್ಲಿ ಬಿಜೆಪಿ ಗರಿಷ್ಠ ಸಂಖ್ಯೆಯ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಶಾ ಸಿಎಂಗೆ ಸ್ಪಷ್ಟವಾಗಿ ಹೇಳಿದ್ದಾರೆ.
ಸಭೆಯಿಂದ ಹೊರಬಂದ ನಂತರ ಸಿಎಂ ಸುದ್ದಿಗಾರರೊಂದಿಗೆ ಮಾತನಾಡಿ, “ನಾನು ಅಮಿತ್ ಶಾ ಅವರ ಬಳಿ ಸಚಿವ ಸಂಪುಟ ಪುನಾರಚನೆ ವಿಷಯವನ್ನು ಪ್ರಸ್ತಾಪಿಸಿದ್ದೇನೆ. ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಚರ್ಚಿಸಿ ನನಗೆ ತಿಳಿಸುವುದಾಗಿ ಹೇಳಿದರು. ಪಕ್ಷದ ಉನ್ನತ ನಾಯಕರು ತಮ್ಮ ನಿರ್ಧಾರವನ್ನು ತಿಳಿಸುತ್ತಾರೆ ” ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.
“ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇತ್ತೀಚಿನ ತೀರ್ಪಿನ ಬಗ್ಗೆಯೂ ನಾನು ಚರ್ಚಿಸಿದ್ದೇನೆ. ಚುನಾವಣೆಗಳನ್ನು ನಡೆಸುವ ನಮ್ಮ ಮುಂದಿನ ನಡೆಯ ಬಗ್ಗೆ ಉನ್ನತ ನಾಯಕರು ನಮಗೆ ಮಾರ್ಗದರ್ಶನ ನೀಡುತ್ತಾರೆ” ಎಂದು ಅವರು ಹೇಳಿದರು.
“ನಾವು ರಾಜ್ಯಸಭೆ ಮತ್ತು ವಿಧಾನ ಪರಿಷತ್ತಿಗೆ ಮುಂಬರುವ ಚುನಾವಣೆಗಳು ಮತ್ತು ರಾಜ್ಯ ರಾಜಕೀಯದ ಮೇಲೆ ಪರಿಣಾಮ ಬೀರುವ ಬಗ್ಗೆಯೂ ಚರ್ಚಿಸಿದ್ದೇವೆ” ಎಂದು ಸಿಎಂ ಹೇಳಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಸ್ವಲ್ಪ ಸ್ಪಷ್ಟತೆ ಅಗತ್ಯವಾಗಿದ್ದು, ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲು ಸರ್ಕಾರ ಉತ್ಸುಕವಾಗಿದೆ ಎಂದು ಅವರು ಹೇಳಿದರು.

Share