ಬೆಂಗಳೂರಿಗೆ-ಜೂನ್ ಅಂತ್ಯದವರೆಗೂ ಸಾಕಾಗುವಷ್ಟು ನೀರನ್ನು ಸಂಗ್ರಹ; ಸಿ ಎಂ

90
Share

 

*ಬೆಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಸುದೀರ್ಘವಾಗಿ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಬಳಿಕ ಮಾಧ್ಯಮಗೋಷ್ಠಿಯಲ್ಲಿ ಹಂಚಿಕೊಂಡ ಮಾಹಿತಿಗಳ ಹೈಲೈಟ್ಸ್….*

*ಕಾವೇರಿ, ಕಬಿನಿಯಲ್ಲಿ ಕುಡಿಯುವ ನೀರಿಗೆ ಅಗತ್ಯ ಇರುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. ಜೂನ್ ಅಂತ್ಯದವರೆಗೂ ಸಾಕಾಗುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. KRS ನಲ್ಲಿ 11.02, ಕಬಿನಿಯಲ್ಲಿ 9.02 ಟಿಎಂಸಿ ನೀರು ಸಂಗ್ರಹವಿದೆ*

*14000 ಸರ್ಕಾರಿ ಬೋರ್ ವೆಲ್ ಗಳಲ್ಲಿ 6900 ಬತ್ತಿವೆ. ಹೀಗಾಗಿ ಸಮಸ್ಯೆ ಆಗಿದೆ. 110 ಹಳ್ಳಿಗಳಲ್ಲಿ 55 ಹಳ್ಳಿಗಳಿಗೆ ಸಮಸ್ಯೆ ಆಗಿದೆ. ಜೂನ್ ಅಂತ್ಯಕ್ಕೆ ಕಾವೇರಿ 5 ನೇ ಹಂತದ ಕಾಮಗಾರಿ ಮುಕ್ತಾಯವಾಗಿ 775 MLD ಹೆಚ್ಚುವರಿ ನೀರು ಸಿಗತ್ತೆ. ಇದು 110 ಹಳ್ಳಿಗಳಿಗೆ ಸರಬರಾಜು ಆಗ್ತದೆ*

*313 ಸ್ಥಳಗಳಲ್ಲಿ ಹೊಸದಾಗಿ ಬೋರ್ ವೆಲ್ ಕೊರೆಸುತ್ತಿದ್ದೇವೆ. 1200 ನಿಷ್ಕ್ರಿಯ ಬೋರ್ ಗಳಿಗೆ ಮರುಜೀವ ನೀಡಲಾಗುವುದು*.

*ಕೊಳೆಗೇರಿ, ಎತ್ತರದ ಪ್ರದೇಶದಲ್ಲಿ ಹಾಗೂ ಬೋರ್ ವೆಲ್ ಮೇಲೆ ಅಬಲಂಬಿತ ಪ್ರದೇಶಗಳಲ್ಲಿ KMF ಸೇರಿ ಎಲ್ಲಾ ಖಾಸಗಿ ಟ್ಯಾಂಕರ್ ಗಳನ್ನು ಬಳಸಲು ಹೇಳಿದ್ದೇನೆ*

*ಕಂಟ್ರೋಲ್ ರೂಮ್ ಗಳ ಸಂಖ್ಯೆ ಹೆಚ್ವಿಸಿ ದೂರು‌ಬಂದ ತಕ್ಷಣ ಆ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು ಸೂಚಿಸಲಾಗಿದೆ. ಟಾಸ್ಕ್ ಫೋರ್ಸ್ ಹೆಚ್ವಿಸಿ ದೂರುಗಳಿಗೆ ತಕ್ಷಣ ಸ್ಪಂದಿಸಲು ಹೇಳಲಾಗಿದೆ*

*ಪಾರ್ಕ್ ಗಳಲ್ಲಿ ಕುಡಿಯುವ ನೀರು ಬಳಸದಂತೆ, ಶುದ್ದೀಕರಿಸಿದ ನೀರು ಬಳಸುವಂತೆ ಸೂಚನೆ*

*ಕೆ.ಸಿ.ವ್ಯಾಲಿ ರೀತಿ ಬೆಂಗಳೂರಿನ‌ ಕೆರೆಗಳನ್ನೂ ಭರ್ತಿ ಮಾಡುವಂತೆ ಸೂಚನೆ ನೀಡಲಾಗಿದೆ*

*ಬತ್ತಿ ಹೋಗಿರುವ ಪ್ರಮುಖ 14 ಕೆರೆಗಳನ್ನು ಭರ್ತಿ ಮಾಡಲು ಸೂಚನೆ ನೀಡಲಾಗಿದೆ. ಇದರಿಂದ ಅಂತರ್ಜಲ ಭರ್ತಿ ಆಗಿ ಬೋರ್ ವೆಲ್ ಗಳಿಗೆ ಮರುಜೀವ ಬರುತ್ತದೆ*

*ಕುಡಿಯುವ ನೀರಿಗೆ ಹಣದ ಕೊರತೆ ಇಲ್ಲ. ಬೇಕಾದಷ್ಟು ಹಣವನ್ನು ಸರ್ಕಾರ ಮತ್ತು ಬಿಬಿಎಂಪಿ ಒದಗಿಸುತ್ತಿದೆ*

*ಪ್ರತಿ ದಿನ ಅಧಿಕಾರಿಗಳು ಸಭೆ ನಡೆಸಿ ವಾರಕ್ಕೊಮ್ಮೆ ಕ್ರಿಯಾಯೋಜನೆ ಸಿದ್ದಪಡಿಸುತ್ತಾರೆ*

*ಭವಿಷ್ಯದಲ್ಲಿ ಎಂಥಾದ್ದೇ ಸಂದರ್ಭದಲ್ಲೂ ನೀರಿನ ಕೊರತೆ ಆಗದಂತೆ ತಜ್ಞರ ಸಮಿತಿಯನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ*

*ದೂರು ಬಂದರೆ BBMP, BWSSB ನವರು ಹೊಣೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ*

*ಬೆಂಗಳೂರಿಗೆ 500 MLD ನೀರು ಕೊರತೆ ಇದೆ. ಈ ಕೊರತೆ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು*

*ಬೋರ್ ವೆಲ್ ಗಳ ಮೇಲೆ ಅವಲಂಬಿತ ಜನರಿಗೆ ನೀರಿನ ತೊಂದರೆ ಆಗದಂತೆ ಕ್ರಮ ವಹಿಸಲು ಸೂಚಿಸಲಾಗಿದೆ*

*1700 ನೀರಿನ ಟ್ಯಾಂಕರ್ ನೋಂದಣಿ ಆಗಿವೆ. ಮಾಲ್ ಗಳು ಸೇರಿ ಖಾಸಗಿಯಾಗಿ ಇರುವ ಬೋರ್ ವೆಲ್ ಗಳಿಂದ ಟ್ಯಾಂಕರ್ ತುಂಬಿಸಿ ನೀರು ಸರಬರಾಜು ಮಾಡಲಾಗುತ್ತಿದೆ*

*ಎಲ್ಲೂ ನೀರಿಗೆ ತೊಂದರೆ ಆಗದಂತೆ ಸ್ಪಷ್ಟ ಸೂಚನೆ ನೀಡಲಾಗಿದೆ*

*ಸಾರ್ವಜನಿಕರು ಕುಡಿಯುವ ನೀರಿನ ದುಂದುವೆಚ್ಚ ಮಾಡಬಾರದು. ಗಾರ್ಡನ್ ಗಳಿಗೆ ಕುಡಿಯುವ ನೀರು ಬಳಸದಂತೆ ಎಚ್ಚರಿಕೆ ನೀಡಲಾಗಿದೆ*

*ಮಳೆನೀರು ಕೊಯ್ಲು, ಬಳಕೆ ನೀರಿನ ಶುದ್ದೀಕರಿಸಿ ಹೆಚ್ಚಿನ ಪ್ರಮಾಣದಲ್ಲಿ ಮರು ಬಳಸುವಂತೆ ಸೂಚಿಸಲಾಗಿದೆ*

*ಕುಡಿಯಲು ಮತ್ತು ಕೈಗಾರಿಕೆಗಳಿಗೆ ಒಟ್ಟು 2600 ಎಂ.ಎಲ್. ಡಿ. ನೀರು ಅಗತ್ಯವಿದೆ. ಇದರಲ್ಲಿ 1450 ಎಂ.ಎಲ್. ಡಿ. ನೀರು ಕಾವೇರಿ ನದಿಯಿಂದ ದೊರೆಯುತ್ತಿದೆ*

*650 ಎಂ ಎಲ್ ಡಿ ನೀರು ಕೊಳವೆ ಬಾವಿಯಿಂದ ದೊರೆಯುತ್ತಿದ್ದು, 500 ಎಂ.ಎಲ್ ಡಿ ನೀರಿನ ಕೊರತೆ ಇದೆ*

*ಮುಖ್ಯವಾಗಿ ಕೊಳೆಗೆರಿಗಳು, ಎತ್ತರದ ಪ್ರದೇಶಗಳು ಹಾಗೂ ಬಿಬಿಎಂಪಿ ಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳಲ್ಲಿ ಸಮಸ್ಯೆ ಆಗದಂತೆ ಸೂಚಿಸಲಾಗಿದೆ*

*ನೀರಿನ ದುರುಪಯೋಗ ತಡೆಗಟ್ಟಲು ಸೂಚಿಸಲಾಗಿದ್ದು, ಈ ಬಗ್ಗೆ 143 ಟಾಸ್ಕ್ ಫೋರ್ಸ್ ಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪ್ರಮಾಣ ಹೆಚ್ಚಿಸಲು ಸೂಚನೆ ನೀಡಲಾಗಿದೆ*

*ಕೇಂದ್ರೀಯ ಸಹಾಯವಾಣಿ ಸಂಖ್ಯೆ 1916 ಹಾಗೂ ವಾಟ್ಸಾಪ್ ಮೂಲಕ ದೂರು ದಾಖಲಿಸಬಹುದು. ಈ ದೂರುಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಸೂಚಿಸಲಾಗಿದೆ*

*ಬೆಂಗಳೂರು ನಗರದ ಪ್ರಮುಖ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ಸೂಚಿಸಲಾಯಿತು


Share